ದಾವಣಗೆರೆ: ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿಪ್ರಮಾಣಪತ್ರಪಡೆದಿರುವವರವಿರುದ್ಧ ದಲಿತ ಸಮುದಾಯದ ಸ್ವಾಮೀಜಿಯವರ ನೇತೃತ್ವದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಮಾದಿಗ ದಂಡೋರ ಸಮಿತಿ ಜಿಲ್ಲಾ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ ಹೇಳಿದರು.
ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದ ಮಾದಿಗ ದಂಡೋರ ಸಮಿತಿ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇತೀ¤ಚಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆಯುತ್ತಿರುವ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲವು ಜನಪ್ರತಿನಿಧಿಗಳು ಸಹ ಇಂತಹ ಕೃತ್ಯಕ್ಕೆ ಸಹಕಾರ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ದೂರಿದರು. ಅನೇಕ ವರ್ಷಗಳಿಂದ ಶೋಷಣೆಗೆ ಒಳಗಾಗಿರುವಂತಹ ಸಮಾಜವನ್ನ ಮುಖ್ಯವಾಹಿನಿಗೆ ತರುವ ಪ್ರಮುಖ ಉದ್ದೇಶದಿಂದಸರ್ಕಾರಮೀಸಲಾತಿಕಲ್ಪಿಸಿವೆ.
ಆದರೆ ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ನಿಜವಾಗಿಯೂ ದೊರೆಯಬೇಕಾದದ ಸೌಲಭ್ಯಗಳನ್ನು ಕಸಿದುಕೊಳ್ಳುವ ಮೂಲಕ ಮೀಸಲಾತಿಯ ಆಶಯವನ್ನೇ ಬುಡಮೇಲು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವವರ ವಿರುದ್ಧ ದಲಿತ ಸಮುದಾಯದ ಸ್ವಾಮೀಜಿಯವರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಸರ್ಕಾರಗಳು ಸಹ ಸುಳ್ಳು ಜಾತಿ ಪ್ರಮಾಣಪತ್ರಪಡೆದಿರುವವರ ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಾದಿಗ ದಂಡೋರ ಹಮ್ಮಿಕೊಳ್ಳುವ ಹೋರಾಟದಲ್ಲಿ ಲಂಬಾಣಿ, ಭೋವಿ, ಛಲವಾದಿ, ಕೊರಚ, ಕೊರಮ ಹಾಗೂ ಮೂಲ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಎಲ್ಲ ಜಾತಿ, ಸಮಾಜದ ಬಾಂಧವರು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಜಿಪಂ ಮಾಜಿ ಸದಸ್ಯ ಎ.ಕೆ. ನಾಗಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿಪ್ರಮಾಣಪತ್ರಪಡೆದಿರುವವರವಿರುದ್ಧ ಮಾದಾರ ಚನ್ನಯ್ಯ ಸ್ವಾಮೀಜಿ ಯವರ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ದಲಿತ ಸಮುದಾಯದ ಎಲ್ಲ ಸ್ವಾಮೀಜಿಯವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.