Advertisement

ಕಲಾವಿದರ ಒಕ್ಕೂಟಕ್ಕೆ ಶಾಶ್ವತ ಅನುದಾನ ಸಿಗಲಿ

05:51 PM Aug 19, 2022 | Team Udayavani |

ಬೀದರ: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟವನ್ನು ಶಾಶ್ವತ ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಒಕ್ಕೂಟದ ಪ್ರಥಮ ವರ್ಷದ ಸಂಭ್ರಮಾಚರಣೆಯಲ್ಲಿ ಕೈಗೊಂಡ ನಿರ್ಣಯ ಹಾಗೂ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.

Advertisement

ಬೆಂಗಳೂರಿನ ಕನ್ನಡ ಭವನದಲ್ಲಿ ಗುರುವಾರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನೀಲಕುಮಾರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಕಸಾಪ, ಕಜಾಪ ಹಾಗೂ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದಂತೆ ಕಲಾವಿದರ ಒಕ್ಕೂಟವನ್ನು ಶಾಶ್ವತ ಅನುದಾನ ಪಡೆಯುವ ಸಂಸ್ಥೆಯನ್ನಾಗಿ ಪರಿಗಣಿಸಿ ಸರ್ಕಾರ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಕ.ಕ ಭಾಗದಲ್ಲಿ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪನೆಯಾಗಬೇಕು. ಪ್ರಸ್ತುತ ಅಸ್ತಿತ್ವದಲ್ಲಿರುವ ಕ.ಕ ಅಭಿವೃದ್ಧಿ ಮಂಡಳಿಯಲ್ಲಿ ಸಾಂಸ್ಕೃತಿಕ ಉದ್ದೇಶಕ್ಕೆ ಕ್ರಿಯಾ ಯೋಜನೆ ರೂಪಿಸಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ, ಜಿಲ್ಲಾ ಉತ್ಸವಗಳನ್ನು ಆಚರಿಸಬೇಕು ಹಾಗೂ ಹಂಪಿ ಉತ್ಸವದ ಮಾದರಿಯಲ್ಲಿ ಈ ಭಾಗದ ಐತಿಹಾಸಿಕ ಕ್ಷೇತ್ರಗಳ ಉತ್ಸವ ನಡೆಸಬೇಕು. ಈ ಭಾಗದ ತತ್ವಪದಕಾರ ಕಡಕೋಳ ಮಡಿವಾಳಪ್ಪ ಅವರ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next