Advertisement

ಕೇಂದ್ರವೂ ರೈತರ ಸಾಲಮನ್ನಾ  ಮಾಡಲಿ

12:27 PM Jul 11, 2017 | |

ದಾವಣಗೆರೆ: ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಒತ್ತಾಯಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಸಂಸದ ಜಿ.ಎಂ. ಸಿದ್ದೇಶ್ವರ್‌ ಕಚೇರಿ ಎದುರು ಪ್ರತಿಭಟಿಸಿದ್ದಾರೆ.

Advertisement

ರಾಜ್ಯ ಸರ್ಕಾರ ಸಹಕಾರ ಸಂಘಗಳಲ್ಲಿನ ರೈತರ 50 ಸಾವಿರ ರೂ. ಸಾಲ ಮನ್ನಾ ಮಾಡಿದಂತೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ
ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು 
ರಾಜ್ಯ ಬಿಜೆಪಿ ಮುಖಂಡರು, ಸಂಸದರ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಸತತ ಎರಡು ವರ್ಷದ ಭೀಕರ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ರೈತರ ಮನವಿಗೆ ಸ್ಪಂದಿಸಿದ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಕಾರ ಸಂಘಗಳಲ್ಲಿನ ರೈತರ 50 ಸಾವಿರ ರೂ. ಸಾಲ ಮನ್ನಾ ಮಾಡಿ, ರೈತರ ನೆರವಿಗೆ
ದಾವಿಸಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು
ಪ್ರತಿಭಟನಾಕಾರರು ಒತ್ತಾಯಿಸಿದರು. 

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡುವ ಮುನ್ನ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನವರು ಮುಖ್ಯಮಂತ್ರಿ
ಸಿದ್ದರಾಮಯ್ಯನವರ ಮೂಗು ಹಿಡಿದು, ಸಾಲ ಮನ್ನಾ ಮಾಡಿಸುವುದಾಗಿ ಹೇಳಿಕೆ ನೀಡಿದ್ದರು. ಮುಖ್ಯಮಂತ್ರಿಗಳು 50
ಸಾವಿರ ಸಾಲ ಮನ್ನಾ ಮೂಲಕ 22 ಲಕ್ಷಕ್ಕೂ ಹೆಚ್ಚಿನ ರೈತರಿಗೆ ಅನುಕೂಲ ಮಾಡಿದ್ದಾರೆ. ಈಗ ಯಡಿಯೂರಪ್ಪನವರು ಪ್ರಧಾನಿ
ನರೇಂದ್ರ ಮೋದಿಯವರ ಮೂಗು ಹಿಡಿದು, ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು
ಎಂದು ಒತ್ತಾಯಿಸಿದರು. 

ತೀವ್ರ ಬರದ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರೆ ಕೇಂದ್ರ ಸರ್ಕಾರದ ಸಚಿವರು ರೈತರ ಬೇಡಿಕೆಯ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಾರೆ. ಸಂಸದ ಶ್ರೀರಾಮುಲು ಸಹ ರೈತರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅತ್ಯಂತ ಖಂಡನೀಯ. ಕೇಂದ್ರ ಸರ್ಕಾರದ ರಚನೆಗೆ ರಾಜ್ಯದ ಜನರು 17 ಸಂಸದರನ್ನು ನೀಡಿದ್ದಾರೆ ಎಂಬುದನ್ನು ಮರೆಯಬಾರದು. 17 ಜನ ಬಿಜೆಪಿ ಸಂಸದರು ಒಮ್ಮೆಯಾದರೂ ಸಂಸತ್‌ನಲ್ಲಿ ರೈತರ ಬಗ್ಗೆ ಮಾತನಾಡದೆ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. 

Advertisement

ಘಟಕದ ಜಿಲ್ಲಾಧ್ಯಕ್ಷ ಸೈಯದ್‌ ಖಾಲಿದ್‌ ಅಹ್ಮದ್‌, ಖಾಲಿದ್‌ ಪೈಲ್ವಾನ್‌, ಎಚ್‌. ಜೆ. ಮೈನುದೀªನ್‌, ಸೈಯದ್‌ ಕಬೀರ್‌, ಫೈಹಿಂ, ಮೊಹಮ್ಮದ್‌ ಸಲೀಂ, ಅಬ್ದುಲ್‌ ಮುನಾಫ್‌, ಎ.ಎಸ್‌. ನೂರ್‌, ನಯಾಜ್‌ ಅಹ್ಮದ್‌, ಸೈಯದ್‌ ರಫೀಕ್‌ ಉಲ್ಲಾ, ಆಸೀಫ್‌ ಉಲ್ಲಾ, ಜಾಕೀರ್‌ ಹುಸೇನ್‌ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next