Advertisement

ಕೇಂದ್ರ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡಲಿ

01:38 PM Jul 11, 2017 | |

ಸಾಗರ: ರಾಜ್ಯದ ರೈತರು ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿ ಮಾಡಿಕೊಂಡಿರುವ ಕೃಷಿ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸೋಮವಾರ ಕಾಂಗ್ರೆಸ್‌ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿ ಕಾರಿಗಳಿಗೆ ಮನವಿ ಸಲ್ಲಿಸಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ಬಿ.ಆರ್‌ .ಜಯಂತ್‌, ಬರಗಾಲದ ಹಿನ್ನೆಲೆಯಲ್ಲಿ ರೈತರು
ಸಹಕಾರಿ ಸಂಸ್ಥೆಗಳಲ್ಲಿ ಮಾಡಿಕೊಂಡಿದ್ದ 50 ಸಾವಿರ ರೂ. ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದೆ. ರಾಜ್ಯದಲ್ಲಿ ಮನ್ನಾದ ಕೂಗು ಎಬ್ಬಿಸಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಬಿ.ಎಸ್‌.ಯಡಿಯೂರಪ್ಪ ಕೇಂದ್ರದ ಮೇಲೆ ಒತ್ತಡ ಹೇರದೆ, ಅಲ್ಲಿಂದ ಸಾಲ ಮನ್ನಾ ಇಲ್ಲ ಎನ್ನುವುದು ಎಂತಹ ರೈತಪರ ನಿಲುವು ಎಂದು ಪ್ರಶ್ನಿಸಿದರು.

ರಾಷ್ಟ್ರದಲ್ಲಿ ಕೋಮು ಸೌಹಾರ್ದತೆ ಕದಡಲು ಬಿಜೆಪಿ ಕಾರಣವಾಗಿದೆ. ಹಿಂದೂ ಮುಸ್ಲಿಂ ನಡುವೆ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ
ಮಾಡುತ್ತಿದ್ದಾರೆ. ಜನವಿರೋಧಿ, ದೇಶ ವಿರೋಧಿ, ಸಮಾಜ ವಿರೋಧಿ ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿಗೆ ರೈತಪರವಾದ ಯಾವುದೆ ಕಾಳಜಿ ಇಲ್ಲವಾಗಿದೆ. ತಕ್ಷಣ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರಾಜ್ಯದ ರೈತರು ಮಾಡಿರುವ ಸಾಲಮನ್ನಾ ಮಾಡದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ತಾಪಂ ಅಧ್ಯಕ್ಷ ಬಿ.ಎಚ್‌. ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ರೈತರ ಪರವಾಗಿ ಬಿಜೆಪಿ ದ್ವಿಮುಖ ನೀತಿ ಜನರಿಗೆ ಈಗಲಾದರೂ ಅರ್ಥವಾಗಬೇಕು.
ಡಾ| ಸ್ವಾಮಿನಾಥನ್‌ ವರದಿ ಜಾರಿ ಬಂದರೆ ಮಾತ್ರ ರೈತರ ಪರಿಸ್ಥಿತಿಯಲ್ಲಿ ಸುಧಾರಣೆ ಸಾಧ್ಯ ಎಂದಿದ್ದರೆ ಕೇಂದ್ರ ವರದಿ ಜಾರಿ ಅಸಾಧ್ಯ ಎಂದು ಘೋಷಿಸಿ ತನ್ನ ನಿಜಬಣ್ಣ ಬಯಲು ಮಾಡಿದೆ. ದೇಶ ಪ್ರೇಮದ ಹೇಳಿಕೆಗಳನ್ನು ಪಠಿಸುವ ಬಿಜೆಪಿ, ಆರೆಸ್ಸೆಸ್‌ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಒಬ್ಬರೂ ಬಲಿದಾನ ಮಾಡಿಲ್ಲ ಎಂದು ಟೀಕಿಸಿದರು.

ಜಿಪಂ ಸದಸ್ಯ ಕಾಗೋಡು ಅಣ್ಣಪ್ಪ ಮಾತನಾಡಿ, ರಾಜ್ಯದ ಬಿಜೆಪಿ ಮುಖಂಡರಿಗೆ ನರೇಂದ್ರ ಮೋದಿಯವರ ಎದುರು ಮಾತನಾಡುವ ಶಕ್ತಿಯೆ ಇಲ್ಲವಾಗಿದೆ. ರಾಜ್ಯವು ಮೂರು ವರ್ಷದಿಂದ ಭೀಕರ ಬರಗಾಲ ಎದುರಿಸುತ್ತಿದ್ದು, ರೈತರು ಆತಂಕದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ರೈತಪರ ನಿಲುವನ್ನು ವ್ಯಕ್ತಪಡಿಸಿದೆ. ಹಾಗೆಯೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ 
ಗಳಲ್ಲಿರುವ ರಾಜ್ಯದ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಎಲ್‌.ಟಿ. ತಿಮ್ಮಪ್ಪ, ನಗರ ಬ್ಲಾಕ್‌ ಅಧ್ಯಕ್ಷ ಮಕೂºಲ್‌ ಅಹ್ಮದ್‌, ಣಪ್ರಧಾನ ಕಾರ್ಯದರ್ಶಿಗಳಾದ ಮಹಾಬಲ ಕೌತಿ, ಗಣಪತಿ ಹೆನಗೆರೆ, ಅನ್ವರ್‌ ಭಾಷಾ, ಎಪಿಎಂಸಿ ಅಧ್ಯಕ್ಷ ಕೆ. ಹೊಳೆಯಪ್ಪ, ನಗರಸಭೆ ಅಧ್ಯಕ್ಷೆ ಉಷಾ ಎನ್‌., ಉಪಾಧ್ಯಕ್ಷೆ ಮರಿಯಾ ಲೀಮಾ, ಜಿಪಂ ಸದಸ್ಯೆ ಅನಿತಾ ಕುಮಾರಿ, ಪ್ರಮುಖರಾದ ಕೆ. ಸಿದ್ದಪ್ಪ, ಎಲ್‌. ಚಂದ್ರಪ್ಪ, ಸುಧಾಕರ ಕುಗ್ವೆ, ಲಲಿತಮ್ಮ, ಪರಿಮಳಾ, ವೀಣಾ ಪರಮೇಶ್ವರ್‌, ಗಣಾ ಧೀಶ್‌, ಜ್ಯೋತಿ ಇತರರು ಇದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next