Advertisement

ಕೋವಿಡ್ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ: ಪೋಷಕರಲ್ಲಿ ಸುಧಾಕರ್ ಮನವಿ

10:05 AM Jan 01, 2021 | Mithun PG |

ಬೆಂಗಳೂರು: ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೋವಿಡ್  ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

Advertisement

ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ಇದು ನನ್ನ ಕಿವಿಮಾತು ಎಂದು ಸುಧಾಕರ್ ತಿಳಿಸಿದ್ದಾರೆ.

SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬುದೇ ಸರ್ಕಾರದ ಧ್ಯೇಯ.

ಇದನ್ನೂ ಓದಿ:   ಇಂದಿನಿಂದ ಶಾಲಾ-ಕಾಲೇಜು ಆರಂಭ: ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ಗುರುಗಳು

ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ ಎಂದು ಇದೇ ವೇಳೆ ಮನವಿ ಮಾಡಿದರು.

Advertisement

ಇದನ್ನೂ ಓದಿ:  ಹೊಸ ವರ್ಷದ ಸಂಭ್ರಮ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ

Advertisement

Udayavani is now on Telegram. Click here to join our channel and stay updated with the latest news.

Next