Advertisement

Ram Mandir; ಕಾಂಗ್ರೆಸ್ ನವರಿಗೆ ಬುದ್ದಿ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿ: ಬಿಎಸ್ ವೈ

02:33 PM Jan 13, 2024 | Team Udayavani |

ಶಿವಮೊಗ್ಗ: ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಪ್ರತಿಷ್ಠಾಪನೆಯಾಗುತ್ತಿರುವುದು ಇಡೀ ವಿಶ್ವದ ಗಮನ ಸೆಳೆದಿದೆ. ಇಡಿ ದೇಶದ ಜನ ನೋಡಲು ಬರುತ್ತಿದ್ದಾರೆ. ಕಾಂಗ್ರೆಸ್ ನವರಿಗೆ ಅಸಮಾಧಾನ, ಅತೃಪ್ತಿಯಿದೆ. ಬಿಜೆಪಿಯವರಿಗೆ ಅನುಕೂಲವಾಗಬಹುದೆಂಬ ಭಯ ಅವರಿಗೆ ಕಾಡುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪಕ್ಷದವರು ಬಂದು ಭಾಗವಹಿಸಬೇಕು ಎನ್ನುವುದು ಮೋದಿ ಅಪೇಕ್ಷೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಮಂತ್ರಿ ಉಪವಾಸವಿದ್ದು ಸೇವೆ ಮಾಡುತ್ತಿದ್ದಾರೆ. ಇನ್ನಾದರೂ‌ ಕಾಂಗ್ರೆಸ್ ನವರಿಗೆ ಸದ್ಬುದ್ದಿ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿ. ಇಲ್ಲದಿದ್ದರೆ ಜನ ಈ ರೀತಿ ನಡವಳಿಕೆ ಸಹಿಸಲ್ಲಎಂದರು.

ಸಿಎಂ ಆಮೇಲೆ ಹೋಗುತ್ತೇನೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಹೋಗಿ ಬಂದರೆ ಒಳ್ಳೆಯದು, ಅನುಕೂಲವಾಗುತ್ತದೆ. ಅದು ಅವರಿಗೆ ಬಿಟ್ಟದ್ದು ಎಂದರು.

ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮ ಪ್ರಭು ಹೆಸರು ನಾಮಕರಣ ವಿಚಾರಕ್ಕೆ ಮಾತನಾಡಿ, ನಾನು ಅದರ ಬಗ್ಗೆ ಏನೇ ಟೀಕೆ ಟಿಪ್ಪಣಿ ಮಾಡಲ್ಲ. ಒಳ್ಳೆಯ ಕೆಲಸ ಯಾರು ಮಾಡಿದರೂ ಒಳ್ಳೆಯದು. ಎಲ್ಲರೂ ಸೇರಿ ಮಾಡಲಿ ಎಂದರು.

ಪೇಜಾವರ ಶ್ರೀಗಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ ವೈ, ಅವರು ಏನು ಹೇಳಿದರೋ ತಪ್ಪು ಕಲ್ಪನೆ ಬೇಡ, ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎಂದೇನಿಲ್ಲ. ಮುಸ್ಲಿಂರು ಪಾದಯಾತ್ರೆ ಮೂಲಕ ಹೋಗುತ್ತಿದ್ದಾರೆ. ಎಲ್ಲಾ ವರ್ಗದ ಜನ ಸಹಕಾರ ಕೊಡುತ್ತಿದ್ದಾರೆ. ರಾಮ ಎಲ್ಲರಿಗೂ ಬೇಕಾಗಿರುವಂತಹವನು. ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎಲ್ಲರಿಗೂ. ಈ ರೀತಿ‌ ಭೇದ ಭಾವ ಮಾಡುವುದು ಸರಿಯಲ್ಲ ಎಂದರು.

Advertisement

ಲೋಕಸಭೆ ಚುನಾವಣೆ ದೃಷ್ಟಿಯಿಂದ ಪ್ರವಾಸ ಆರಂಭವಾಗಿದೆ. ವಿಜಯೇಂದ್ರ‌ ಅಧ್ಯಕ್ಷರಾದ ಮೇಲೆ ಎಲ್ಲಾ ಕಡೆ ಓಡಾಡಿ ಸಂಘಟನೆ ಮಾಡುತ್ತಿದ್ದಾರೆ. ಒಳ್ಳೆಯ ಬೆಂಬಲ ಸಿಗುತ್ತಿದೆ. ಇನ್ನು 2-3 ದಿನವಾದ ಮೇಲೆ ನಾನು ಸಹ ದಿನಕ್ಕೆ ಎರಡು ಜಿಲ್ಲೆಯಂತೆ ಪ್ರವಾಸ ಮಾಡುತ್ತೇನೆ. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಬಿಎಸ್ ವೈ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next