Advertisement

ಮಹದಾಯಿ ಬಗ್ಗೆ ಕಾಂಗ್ರೆಸ್‌ ನಿಲುವು ಸ್ಪಷ್ಟಪಡಿಸಲಿ

10:45 AM Jan 28, 2018 | Team Udayavani |

ಬೆಂಗಳೂರು: ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವ ಮೊದಲು ಗೋವಾ ಕಾಂಗ್ರೆಸ್‌ ಮತ್ತು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದ್ದಾರೆ.

Advertisement

ಮಹದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಗೋವಾ ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿದ್ದಾರೆ. ಆದರೆ, ಗೋವಾ ಕಾಂಗ್ರೆಸ್‌ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಮೇಲಾಗಿ ಸೋನಿಯಾ ಗಾಂಧಿ ಅವರು ಈ ಹಿಂದೆ ಗೋವಾದಲ್ಲಿ ನಿಂತು, ಮಹದಾಯಿಯಿಂದ ಕರ್ನಾಟಕಕ್ಕೆ ಹನಿ ನೀರೂ ಬಿಡುವುದಿಲ್ಲ ಎಂದು ಹೇಳಿದ್ದಾರೆ. 

ಹೀಗಾಗಿ ಮುಖ್ಯಮಂತ್ರಿಗಳು ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವ ಬದಲು ಪಕ್ಷದ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಿಲುವೇನು ಎಂಬುದನ್ನು ಬಹಿರಂಗಪಡಿಸಬೇಕು. ಅಲ್ಲಿವರೆಗೂ ನಾವು ಅವರನ್ನು ಸುಮ್ಮನೆ ಬಿಡುವುದಿಲ್ಲ.

ರಾಹುಲ್‌ಗಾಂಧಿ ರಾಜ್ಯ ಭೇಟಿ ವೇಳೆ ಅವರ ವಿರುದಟಛಿ ಸತ್ಯಾಗ್ರಹ, ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ ರಾಯಚೂರಿನ ಹನುಮನಗೌಡ ಬೆಳಗುರ್ಕಿ ಮತ್ತು ಅವರ ಬೆಂಬಲಿಗರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡ ಬಿಎಸ್‌ವೈ, ಪಕ್ಷದ ಸಿದಾಟಛಿಂತ ಮತ್ತು ಸಮರ್ಥ ನಾಯಕತ್ವ, ಮಾರ್ಗದರ್ಶನದ ಪರಿಣಾಮ ಬಿಜೆಪಿಗೆ ಸೆರ್ಪಡೆಗೊಳ್ಳುತ್ತಿರುವ ನಾಯಕರ ಪಟ್ಟಿ ಬೆಳೆಯುತ್ತಲೇ ಇದೆ. ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next