Advertisement
ಸವಣೂರಿನಲ್ಲಿ ಚುನಾವಣಾ ಪ್ರಚಾರಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲು ಮಾಡುವ ಬಿಜೆಪಿ ಪಕ್ಷಕ್ಕೆ ಮತ ಹಾಕಬೇಡಿ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರೀಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ಮೋದಿಯವರ ವಿರುದ್ಧ ಹೇಳಲು ಏನೂ ಇಲ್ಲ. ಕಳೆದ ಬಾರಿ ಇದನ್ನೇ ಹೇಳಿದ್ದರು. ಸಂವಿಧಾನ ಬದಲು ಮಾಡಲು ಯಾರ ಕೈಯಲ್ಲೂ ಆಗುವುದಿಲ್ಲ. ಎಲ್ಲದಕ್ಕೂ ಕಾನೂನಿದೆ. ಸಂವಿಧಾನ ಬದಲು ಮಾಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಭಯ ಹುಟ್ಟಿಸಲು ಈ ರೀತಿ ಹೇಳುತ್ತಿದ್ದಾರೆ. ಡಾ ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆ ಮಾಡುವ ಶಾಶ್ವತ ಕೆಲಸ ಮಾಡಿದ್ದಾರೆ ಎಂದರು.
Related Articles
Advertisement
ಅವರ ಎಲೆಯೊಳಗೆ ಕಲ್ಲು ಬಿದ್ದಿದೆ
ಬಿಜೆಪಿ 400 ಸೀಟು ಗೆಲ್ಲುವುದಿಲ್ಲ, ಅದಿಕಾರಕ್ಕೆ ಬರುವುದಿಲ್ಲ ಎಂಬ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರ ಎಲೆಯೊಳಗೆ ಕಲ್ಲು ಬಿದ್ದಿದೆ. ಅವರು ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ ಇನ್ನೊಬ್ಬರ ಬಗ್ಗೆ ಮಾತನಾಡುತ್ತಾರೆ. ನಾವು 100% 370 ಸೀಟು ದಾಟುತ್ತೆವೆ. ಕೇಂದ್ರದಲ್ಲಿ ಮತ್ತೆ ನಮ್ಮ ಬಿಜೆಪಿ ಸರ್ಕಾರ ಬರುತ್ತದೆ ಎಂದರು.
ಇದೇ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿ ಅವರ ಪೋನ್ ಕದ್ದಾಲಿಕೆಯ ಆರೋಪಕ್ಕೆ ಪ್ರತಿಕ್ರೀಯಿಸಿ, ಪೋನ್ ಕದ್ದಾಲಿಕೆಯ ಬಗ್ಗೆ ಆರೋಪ ಪ್ರತ್ಯಾರೋಪ ಇವೆ. ಯಾವುದಕ್ಕೂ ಸ್ಪಷ್ಟತೆ ಇಲ್ಲ. ಸ್ಪಷ್ಟತೆ ಇದ್ದಾಗ ಮಾತ್ರ ಅದರ ಬಗ್ಗೆ ಮಾತಾಡಬೇಕು ಎಂದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಥರ ಸಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಆಗುತ್ತಾರೆ ಎಂಬ ಮಾತಿಗೆ ಪ್ರತಿಕ್ರೀಯಿಸಿ, ಜನರು ತೀರ್ಮಾನ ಮಾಡಿದರೆ ಯಾಕೆ ಆಗಬಾರದು ಆಗಲಿ ಬಿಡಿ ಎಂದು ಹೇಳಿದರು.