ಬಸವಕಲ್ಯಾಣ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮರ್ಪಕವಾಗಿ ಬೀಜ, ರಸಗೊಬ್ಬರ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಬೀಜ, ಗೊಬ್ಬರದ ಸಮಸ್ಯೆ ರೈತರನ್ನು ಕಾಡಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಹೇಳಿದರು.
ನಗರದ ರೈತ ಸಂಪರ್ಕ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಅವರು, ಮುಂಗಾರು ಹಂಗಾಮು ಅತ್ಯಂತ ಮಹತ್ವದ್ದಾಗಿದೆ. ಈ ಹಂಗಾಮಿನಲ್ಲಿ ರೈತರಿಗೆ ಸಕಾಲದಲ್ಲಿ ಬೀಜ ಗೊಬ್ಬರ ಲಭ್ಯವಾಗುವಂತೆ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಕೇಂದ್ರಗಳಲ್ಲಿ ಬೀಜ, ರಸಗೊಬ್ಬರ ಲಭ್ಯತೆ ಕುರಿತು ರೈತರಿಗೆ ಅಗತ್ಯ ಮಾಹಿತಿ ನೀಡಬೇಕು. ಬೀಜಕ್ಕಾಗಿ ರೈತರು ಗಂಟೆಗಳ ಕಾಲ ಸರದಿಯಲ್ಲಿ ನಿಲ್ಲುವಂತಾಗಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ವಿಜಯಸಿಂಗ್ ಅವರು ರೈತ ಸಂಪರ್ಕ ಕೇಂದ್ರದಲ್ಲಿನ ವಿವಿಧ ಬೀಜಗಳ ದಾಸ್ತಾನು ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಹಾಯಕ ಕೃಷಿ ನಿರ್ದೇಶಕ ಮಾಥಂìಡ್, ಪ್ರಮುಖರಾದ ದಾವೂದ್ ಮಂಠಾಳ, ಬಸವರಾಜ ಬಿರಾದಾರ, ನಗರಸಭೆ ಸದಸ್ಯ ರವಿ ಬೋರಾಳೆ, ಓಂ ಪಾಟೀಲ, ಯೋಗೇಶ್ ಗುತ್ತೇದಾರ ಇನ್ನಿತರರಿದ್ದರು.