Advertisement
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನ ಮಳೆ ಅಬ್ಬರಿಸಿತ್ತು. ಆದರೆ, ಕಳೆದ ಜೂನ್ ಆರಂಭದಿಂದ ಈವರೆಗೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಹೀಗಾಗಿ ಮಳೆ ಕೊರತೆಯಿರುವ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದರು.
ಮಳೆ ಕೊರತೆ ನಡುವೆಯೂ ಹೆಸರು ಬೆಳೆ ಬಂದಿದ್ದು, ಮಾರುಕಟ್ಟೆಯಲ್ಲೀಗ ಕೇವಲ 4ಸಾವಿರ ರೂ.ಗಳಲ್ಲಿ ಮಾರಾಟಗೊಳ್ಳುತ್ತಿದೆ. ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಗದಿಗೊಳಿಸಿರುವ 6,975 ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ತಕ್ಷಣವೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜಿಲ್ಲೆಗೆ 2017ರ ಮುಂಗಾರಿಗೆ 55 ಕೋಟಿ ರೂ. ಗಳು ಬಿಡುಗಡೆಯಾಗಿದ್ದು, ರೈತರ ಅನುಕೂಲಕ್ಕಾಗಿ ಸರ್ಕಾರ ಜಿಲ್ಲೆಗೊಂದು ಫಸಲ್ ಭಿಮಾ ಯೋಜನೆಯ ಸೇವಾ ಕೇಂದ್ರ ಆರಂಭಿಸಬೇಕೆಂದು ಹೇಳಿದರು. ಮರಳಿಗಾಗಿ ಪರದಾಟ:
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅ ಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದರೂ ಮರಳು ನೀತಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಇದರಿಂದ ಅಕ್ರಮ ಮರಳು ಸಾಗಾಟ ಹೆಚ್ಚಿದೆ. ಬಡವರು, ಮಧ್ಯಮ ವರ್ಗದ ಜನರು ಮರಳು ಸಿಗದೇ ಪರದಾಡುವಂತಾಗಿದೆ. ಕೂಡಲೇ ನೂತನ ಮರಳು ನೀತಿ ಜಾರಿಗೊಳಿಸಬೇಕು ಎಂದರು.
Related Articles
ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕರಿಸಿರುವ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದತ್ತ ಅ ಧಿಕಾರ ನೀಡಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ. 1999ರಿಂದ ಹೋರಾಟ ನಡೆಯುತ್ತಿದ್ದರೂ, ಯಾವುದೇ ಸರ್ಕಾರಗಳು ಸ್ಪಂದಿಸಿರಲಿಲ್ಲ. ಆದರೆ, ಎನ್‌ಡಿಎ ನೇತೃತ್ವದ ಸರ್ಕಾರದ ತೀರ್ಮಾನದಿಂದ 60 ಕೋಟಿ ಜನತೆಗೆ ಅನುಕೂಲವಾಗಲಿದೆ ಎಂದರು.
Advertisement