Advertisement

Belagavi Session; ಸರಕಾರ ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ: ಬಿ.ವೈ.ವಿಜಯೇಂದ್ರ

12:51 PM Dec 04, 2023 | Team Udayavani |

ಬೆಳಗಾವಿ: ಉತ್ತರ ಕರ್ನಾಟಕದ ಜನರು ಈ ಸರಕಾರ ಮತ್ತು ಅಧಿವೇಶನದಿಂದ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸರಕಾರ ಅವರ ನಿರೀಕ್ಷೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರು ಬಹಳ ಕಷ್ಟದಲ್ಲಿದ್ದಾರೆ. ರೈತ ಸಮುದಾಯ ಪರಿಹಾರದ ನಿರೀಕ್ಷೆಯಲ್ಲಿದೆ. ರಾಜ್ಯ ಸರಕಾರ ಎಲ್ಲರಿಗೂ ಸಿಹಿ ಸುದ್ದಿ ಕೊಡಲಿ ಎಂದರು.

ಹೊಸ ಸರಕಾರದಿಂದ ಜನರು ಸಾಕಷ್ಟು ನಿರೀಕ್ಷೆಗಳನ್ನು ಮಾಡಿದ್ದರು. ಆದರೆ ದಿನ ಕಳೆದಂತೆ ಎಲ್ಲ ಹುಸಿಯಾಗಿದೆ. ಅಧಿವೇಶನದ ಮುಖಾಂತರವಾದರೂ ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಲಿ ಎಂದು ಹೇಳಿದರು.

ಸದನದ ಒಳಗೆ ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡಲಿದೆ. ಸಮರ್ಥವಾಗಿ ಜನತೆಯ ನಿರೀಕ್ಷೆಯಂತೆ ಸದನದಲ್ಲಿ ವಿಷಯ ಪ್ರಸ್ತಾಪ ಮಾಡಲಾಗುವದು ಎಂದರು.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಕಾರ್ಯಕರ್ತರ ಮುಖದಲ್ಲಿನ ಸಂತೋಷ ನೋಡಿದರೆ ಗೊತ್ತಾಗುತ್ತದೆ. ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟ ಬಿಜೆಪಿ ವಿರುದ್ಧ ಬಿಂಬಿಸುವ ಪ್ರಯತ್ನ ಮಾಡಿದರು. ಚುನಾವಣೆಯ ಪಲಿತಾಂಶ ಬಿಜೆಪಿಗೆ ದೊಡ್ಡ ಶಕ್ತಿ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳನ್ನು ಜನರು ನಂಬುತ್ತಿಲ್ಲ ಎಂದರು. ಲೋಕಸಬೆ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಕಾಂಗ್ರೆಸ್ ಪಕ್ಷವನ್ನು ಧೂಳಿಪಟ ಮಾಡಲಿದ್ದೇವೆ ಎಂದು ಭವಿಷ್ಯ ನುಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next