Advertisement
ರೈತ ಮುಖಂಡ ಚುನ್ನಪ್ಪ ಪೂಜೇರಿ ಮಾತನಾಡಿ, ರಾಜ್ಯದಲ್ಲಿ ಜಾರಿ ಆಗಲಿರುವ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯು ಮಧ್ಯವರ್ತಿಗಳಿಂದ ಮುಕ್ತಗೊಳಿಸುವ ನೆಪದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಈಗಾಗಲೇ ಕಬ್ಬನ್ನು ಖಾಸಗಿ ಕಂಪನಿಗಳಿಗೆ ನೀಡಿ ರೈತರು ಅನುಭವಿಸುತ್ತಿರುವ ಗೋಳು ಕೇಳುವವರಿಲ್ಲ. ತಿದ್ದುಪಡಿ ಅನಿವಾರ್ಯವೇ ಆಗಿದ್ದರೆ ಬೆಳೆಯನ್ನು ಖರೀದಿಸುವ ಕಾರ್ಪೊರೇಟ್ ಕಂಪನಿಗಳ ಮೇಲೆ ಸರ್ಕಾರ ಪೂರ್ಣ ಹಿಡಿತ ಹೊಂದಿರಬೇಕು. ಇನ್ನು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯು ಕೃಷಿ ಕ್ಷೇತ್ರಕ್ಕೆ ಬಹುದೊಡ್ಡ ಹೊಡೆತವೇ ಸರಿ. ಕೃಷಿ ಹೆಸರಿನಲ್ಲಿ ಭೂಮಿಖರೀದಿಸುವ ಕಾರ್ಪೊರೇಟ್ ಕಂಪನಿಗಳು ಕಾಲಕ್ರಮೆಣ ಉದ್ಯಮಕ್ಕೆ ಬಳಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿವೆ ಎಂದರು. ಮಲ್ಲಪ್ಪ ಮದಗುಣಕಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಮುಕ್ತರಾಗಿ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಬೆಳೆಯನ್ನು ಮಾರಾಟ ಮಾಡಲು ಸರಕಾರವು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡಿದೆ ಎಂದರು.
Related Articles
Advertisement