Advertisement

ಶಾಲಾರಂಭದ ಬಗ್ಗೆ ಸರ್ಕಾರ ಮತ್ತೊಮ್ಮೆ ಚಿಂತಿಸಲಿ: ಸುಬುಧೇಂದ್ರ ಶ್ರೀ

03:17 PM Nov 05, 2020 | keerthan |

ರಾಯಚೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅವರ ಆರೋಗ್ಯವೂ ಅಷ್ಟೇ ಮುಖ್ಯ. ಹೀಗಾಗಿ ಶಾಲೆಗಳ ಆರಂಭಕ್ಕೆ ಇನ್ನೂ ಸ್ವಲ್ಪ ದಿನ ಕಾಯುವುದು ಸೂಕ್ತ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿಪ್ರಾಯಪಟ್ಟರು.

Advertisement

ಶ್ರೀಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವೈರಸ್ ಎರಡನೇ ಹಂತದಲ್ಲಿ ಹರಡುವ ಭೀತಿ ಇದೆ. ಈ ವೇಳೆ ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇದ್ದಲ್ಲಿ ಸೋಂಕಿಗೆ ತುತ್ತಾಗಬೇಕಾಗುತ್ತದೆ. ಹೀಗಾಗಿ ಶಾಲೆ ಆರಂಭದ ವಿಚಾರದಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.

ಲಾಕ್ ಡೌನ್ ನಿಂದ ಶ್ರೀಮಠಕ್ಕೆ 67 ಕೋಟಿ ರೂ. ಗೆ ಅಧಿಕ ನಷ್ಟವಾಗಿದೆ. ಸಂಕಷ್ಟ ಕಾಲದಲ್ಲಿ ಮಠದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದೆ. ಆದರೆ, ಶ್ರೀಮಠದಿಂದ ಯಾವುದೇ ಸರ್ಕಾರಕ್ಕೆ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿಲ್ಲ. ಇದು ಭಕ್ತರಿಂದ ನಡೆಯುವ ಮಠವಾಗಿದ್ದು, ಈಗ ಮತ್ತೆ ಮಠಕ್ಕೆ ಬರುವ ಸಂಖ್ಯೆ ಹೆಚ್ಚುತ್ತಿದ್ದು, ಆದಾಯವೂ ಹೆಚ್ಚಾಗಬಹುದು ಎಂದರು.

ನ.20ರಿಂದ ಡಿ.1 ರವರೆಗೆ ತುಂಗಭದ್ರಾ ನದಿಗೆ ಪುಷ್ಕರ ಆಗಮಿಸಲಿದ್ದು, ಶ್ರೀಮಠದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಿತ್ಯ ಸುಮಾರು 25 ಸಾವಿರ ಭಕ್ತರು ಆಗಮಿಸುವ ನಿರೀಕ್ಷ ಇದೆ. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸ್ನಾನಘಟ್ಟ, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಕಾರಣಕ್ಕೆ ಭಕ್ತರು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next