Advertisement

ಆರೋಗ್ಯ ಕೇಂದ್ರ ಬದಲಾಗಲಿ

11:36 AM Dec 18, 2021 | Team Udayavani |

ಶಹಾಬಾದ: ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲವೆನ್ನುವ ರೀತಿಯಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವಾತಾವರಣ ಬದಲಾಗಬೇಕಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

Advertisement

ಶುಕ್ರವಾರ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಸರಿಯಾದ ಸಮಯಕ್ಕೆ ವೈದ್ಯರು ಸೇರಿದಂತೆ ಸಿಬ್ಬಂದಿ ವರ್ಗವದವರು ಹಾಜರಾಗಬೇಕು. ಆಗ ಮಾತ್ರ ಸರ್ಕಾರಿ ಆಸ್ಪತ್ರೆ ಜೀವಂತವಾಗಿಡಲು ಸಾಧ್ಯ ಎಂದರು.

ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ಸೇರಿದಂತೆ ಕೇವಲ ರೋಗಿಗಳನ್ನಷ್ಟೇ ಅಲ್ಲ ಚಿಕಿತ್ಸಾಲಯಗಳು ಜೀವಂತವಾಗಿರಬೇಕು. ವೈದ್ಯರ ಸಲಹೆಯಂತೆ ಆರೋಗ್ಯ ಕೇಂದ್ರದ ಆವರಣ ಸ್ವತ್ಛವಾಗಿಡಲು ಕೆಕೆಆರ್‌ ಡಿಬಿಯಿಂದ ಅನುದಾನ ನೀಡುವಂತೆ ಪತ್ರ ಬರೆಯಲಾಗುವುದು. ಅಲ್ಲದೇ ಆಸ್ಪತ್ರೆಗೆ ಬೇಕಾದ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕರು ಬಡಕುಟುಂಬದ ಹಿನ್ನೆಲೆಯುಳ್ಳವರು ಆಗಿರುತ್ತಾರೆ. ಆದ್ದರಿಂದ ಅಂತಹವರಿಗೆ ಸೂಕ್ತ ಚಿಕಿತ್ಸೆ ನೀಡುವ ವಿಷಯದಲ್ಲಿ ವೈದ್ಯರಿಂದ ಧನಾತ್ಮಕ ಚಿಂತನೆಯಾಗಬೇಕಿದೆ ಎಂದರು.

Advertisement

ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕ ರೋಗಿಗಳು ಹಣಕಾಸಿನ ತೊಂದರೆ ಅನುಭವಿಸುವಂತವರೇ ಹೆಚ್ಚು. ಆರ್ಥಿಕ ತೊಂದರೆಯಿಂದ ಬಳಲುವವರಿಗಾಗಿಯೇ ಸರ್ಕಾರಿ ಆಸ್ಪತ್ರೆಗಳು ಎನ್ನುವಂತಾಗಿದೆ. ಸರ್ಕಾರ ಸಕಲ ರೀತಿಯ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸುತ್ತಿದ್ದು, ರೋಗಿಗಳಿಗೆ ಅವುಗಳನ್ನು ತಲುಪಿಸುವ ಕಾರ್ಯ ವೈದ್ಯಕೀಯ ಸಿಬ್ಬಂದಿಯಿಂದ ಆಗಬೇಕಿದೆ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಶೀದ್‌ ಮರ್ಚಂಟ್‌, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ವೈದ್ಯಾಧಿಕಾರಿ ಮಹ್ಮದ್‌ ಅಬ್ದುಲ್‌ ರಹೀಮ್‌, ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಕುಮಾರ ಚವ್ಹಾಣ, ಶರಣಬಸಪ್ಪ ಪಗಲಾಪುರ, ನಗರಸಭೆ ಸದಸ್ಯರಾದ ಡಾ| ಅಹ್ಮದ್‌ ಪಟೇಲ್‌, ರವಿ ರಾಠೊಡ, ಸಿದ್ರಾಮ ಕುಸಾಳೆ ಹಾಗೂ ಆಸ್ಪತ್ರೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next