ಮಲ್ಪೆ: ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದರೂ, ಪ್ರತಿಭೆಗೆ ಕುಂದಿಲ್ಲ ಎಂಬುದಕ್ಕೆ ವಚನಕಾರರೇ ಉತ್ತಮ ನಿದರ್ಶನ. ನಮ್ಮ ಸುತ್ತಮುತ್ತ ಲಿನ ಸಮಾಜದಲ್ಲಿ ಹಲವು ಪ್ರತಿಭೆಗಳಿದ್ದು, ಅಂತಹ ಪ್ರತಿಭೆ ಪ್ರೋತ್ಸಾಹಿಸಿ ಬೆಳೆಸುವ ಹೊಣೆ ನಮ್ಮ ಮೇಲಿದೆ ಎಂದು ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದರು.
ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ದಲಿತ ವಚನಕಾರರ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದರು.
ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಅವರು ವಚನಕಾರರ ವಚನ ವಾಚಿಸಿ ದರು. ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ರಾವ್ ವಹಿಸಿದ್ದರು. ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ , ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಎಸ್.ಹೆಗ್ಡೆ ಉಪಸ್ಥಿತರಿದ್ದರು.
ಕನ್ನಡ ಪ್ರಾಧ್ಯಾಪಕ ಡಾ| ರಂಗನಾಥ ಕಂಟಿನಕುಂಟೆ ದಲಿತ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಪೂರ್ಣಿಮಾ ಸ್ವಾಗತಿಸಿದರು. ಜಯಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಅಕ್ಷಯ ವಂದಿಸಿದರು.