Advertisement
ಅವರು ಇಲ್ಲಿನ ಹಳೆಗೇಟು ಬಳಿಯ ದಡ್ಡು ನೇತ್ರಾವತಿ ನದಿ ಕಿನಾರೆ ಪಕ್ಕದಲ್ಲಿ ನಡೆಯುವ 35ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಮಾತನಾಡಿದರು.ಕಂಬಳ ಕ್ರೀಡೆ ಬಗ್ಗೆ ಪತ್ರಿಕೆಯಲ್ಲಿ ಓದಿದ್ದೆ. ಕಳೆದ 8 ತಿಂಗಳಿನಿಂದ ದ.ಕ. ಜಿಲ್ಲೆಯಲ್ಲಿ ಇದ್ದು, 3 ಕಂಬಳ ನೋಡುವ ಅವಕಾಶ ದೊರೆತಿದೆ. ನಾನು ತಿಳಿದುಕೊಂಡ ಪ್ರಕಾರ ಇದೊಂದು ಅದ್ಭುತ ಮನೋರಂಜನ ಕ್ರೀಡೆಯಾಗಿದ್ದು, ಇದಕ್ಕೆ ವಿಶ್ವ ಮಾನ್ಯತೆ ದೊರಕುವಂತಾಗಬೇಕು ಎಂದರು.
ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ ಕಂಬಳ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಒತ್ತಾಯಿಸುವ ಮೂಲಕ ಮಂಗಳೂರಿನಲ್ಲಿ ಸಂಘಟಿತರಾಗಿ ಸೇರಿ ಹಕ್ಕೊತ್ತಾಯ ಮಂಡನೆ ಮಾಡಬೇಕಾಗಿದೆ. ಜತೆಗೆ ಅಕಾಡೆಮಿ ಸ್ಥಾಪನೆ ಬಗ್ಗೆಯೂ ಸರಕಾರಕ್ಕೆ ಒತ್ತಡ ತರಬೇಕಾಗಿದೆ ಎಂದರು. ಸರಕಾರದ ಮಾನ್ಯತೆ ಸಿಗಲಿ
ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ ಮಾತನಾಡಿ, ಜಾನಪದ ಕ್ರೀಡೆಯಾದ ಕಂಬಳವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯ ಇಲ್ಲ. ರೈತರ ಮೆಚ್ಚಿನ ಕ್ರೀಡೆ ಕಂಬಳಕ್ಕೆ ಸರಕಾರದ ಮಾನ್ಯತೆ ದೊರಕುವಂತಾಗಲಿ ಎಂದರು.
Related Articles
ಕಂಬಳ ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ನೆಕ್ಕರೆ ಸ್ವಾಗತಿಸಿ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಪದಾಧಿಕಾರಿಗಳಾದ ಚಂದ್ರಶೇಖರ ಮಡಿವಾಳ, ಯೋಗೀಶ್ ಸಾಮಾನಿ ಸಂಪಿಗೆದಡಿ, ಆದರ್ಶ ಕಜೆಕ್ಕಾರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
Advertisement
ಅಕಾಡೆಮಿ ಅಗತ್ಯಪುತ್ತೂರು ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ, ಕಂಬಳಕ್ಕೆ ಅಕಾಡೆಮಿ ಸ್ಥಾಪನೆ ಆಗಬೇಕು, ಈ ನಿಟ್ಟಿನಲ್ಲಿ ಪ್ರಯತ್ನ ಅಗತ್ಯ ಎಂದ ಅವರು ಅಕಾಡೆಮಿ ಆದರೆ ಸರಕಾರದಿಂದ ಅನುದಾನ ಪಡೆಯಬಹುದಾಗಿದೆ. ಆ ಮೂಲಕ ಕಂಬಳವನ್ನು ಮತ್ತಷ್ಟು ಮೆರುಗಿನಿಂದ ಮಾಡಬಹುದಾಗಿದೆ ಎಂದರು. ನಿಲ್ಲಿಸುವ ಪ್ರಶ್ನೆಯೇ ಇಲ್ಲ
ವಿಜಯ-ವಿಕ್ರಮ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪ್ರಸ್ತಾವಿಕವಾಗಿ ಮಾತನಾಡಿ, ವೀರ ಕ್ರೀಡೆ ಕಂಬಳ ನಿಲ್ಲಬಾರದು ಎಂಬ ಉದ್ದೇಶದಿಂದ ಮುಂದುವರಿಸಿಕೊಂಡು ಬಂದಿದ್ದೇನೆ. ಸರ್ವರ ಸಹಕಾರದಿಂದ ಮುನ್ನಡೆಯುತ್ತಿದೆ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದರು.