Advertisement
ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಬಾರಿಯ ಚುನಾವಣೆಯು ರಾಷ್ಟ್ರಧರ್ಮದ ಉಳಿವಿನ ಚುನಾವಣೆಯಾಗಿದೆ. ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಭಾರತ ವಿಶ್ವಗುರುವನ್ನಾಗಿ ರೂಪಿಸಬೇಕೆಂಬ ಸಂಕಲ್ಪದ ಜತೆಗೆ ಭ್ರಷ್ಟಾಚಾರ, ಸ್ವಹಿತಾಸಕ್ತಿ ರಹಿತವಾಗಿ ದೇಶದ ಅಭಿವೃದ್ಧಿಗಾಗಿ ಅವರು ನೀಡಿರುವ ಕೊಡುಗೆಗಳು ಅಪಾರವಾಗಿವೆ. ಕಾಪು ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದು ಅದಕ್ಕಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
Related Articles
Advertisement
ಪಡುಕುತ್ಯಾರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನಕ್ಕೆ ಅನೇಕ ಮಂದಿ ಅಭ್ಯರ್ಥಿಗಳು ಆಗಮಿಸಿ, ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದ್ದಾರೆ. ಹೆಚ್ಚಿನ ಉಮೇದ್ವಾರರ ಪರಿಚಯ ಇರುವುದರಿಂದ ಎಲ್ಲರೊಡನೆ ಕುಶಲೋಪರಿ, ವಿಚಾರ ವಿನಿಮಯ ನಡೆಸಿ ಶುಭವಾಗಲಿ ಎಂದು ಆಶೀರ್ವದಿಸಿ ಅನುಗ್ರಹ ಮಂತ್ರಾಕ್ಷತೆಯನ್ನು ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ನೀಡಿರುತ್ತಾರೆ.
ರಾಜಕೀಯ ಪಕ್ಷಗಳು ಇದನ್ನು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿ ತಮಗೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾ ವರದಿ, ಸಮೂಹ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದಲ್ಲಿ ಆನೆಗುಂದಿ ಮಹಾಸಂಸ್ಥಾನವು ಅದಕ್ಕೆ ಜವಾಬ್ದಾರರಾಗುವುದಿಲ್ಲ ಎಂದು ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಮಹಾಸಂಸ್ಥಾನ ಕಟಪಾಡಿ ಇದರ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ. ಬಿ. ಆಚಾರ್ ಕಂಬಾರು ತಿಳಿಸಿದ್ದಾರೆ.
ಜಗದ್ಗುರುಗಳು ಮಹಾ ಸಂಸ್ಥಾನದ ವತಿಯಿಂದ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಬೆಂಬಲ ನೀಡಿಲ್ಲ, ಆಶ್ವಾಸನೆಯನ್ನು ನೀಡಿಲ್ಲ ಅಲ್ಲದೆ ನಿರ್ದಿಷ್ಟ ಪಕ್ಷವನ್ನು ಬೆಂಬಲಿಸಬೇಕು ಎನ್ನುವ ಕರೆಯನ್ನೂ ಸಮಾಜಕ್ಕೆ ನೀಡಿಲ್ಲ. ಹಾಗೆ ಏನಾದರೂ ಪತ್ರಿಕೆಗಳಲ್ಲಿ, ಸಮೂಹ ಮಾದ್ಯಮಗಳಲ್ಲಿ ಪ್ರಕಟವಾಗಿದ್ದಲ್ಲಿ ಅದು ಅವರ ವೈಯುಕ್ತಿಕ ಅಭಿಪ್ರಾಯವಾಗಿರುತ್ತದೆ. ಅಲ್ಲದೆ ಇದಕ್ಕೆ ಆನೆಗುಂದಿ ಮಹಾ ಸಂಸ್ಥಾನವು ಜವಾಬ್ದಾರಿಯಾಗುವುದಿಲ್ಲ ಎಂದು ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ. ಬಿ. ಆಚಾರ್ ಕಂಬಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.