Advertisement
ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹೋರಾಟದ ಗಳಿಗೆಗಳನ್ನು ಸ್ಮರಿಸುವ ಉದ್ದೇಶದಿಂದ ರಾಜ್ಯದಲ್ಲಿ ಸ್ವಾತಂತ್ರ್ಯ ಭಾರತಿಗೆ ಕನ್ನಡದಾರತಿ ಅಭಿಯಾನ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕನ್ನಡದ ಹೋರಾಟಗಾರರನ್ನು, ಅವರ ತ್ಯಾಗ ಬಲಿದಾನಗಳನ್ನು ನಾವಿಂದು ಸ್ಮರಿಸಬಹುದು. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ತ್ಯಾಗಗಳನ್ನು ಇಂದಿನ ಹಾಗೂ ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಅವರಲ್ಲಿ ಸ್ವಾಭಿಮಾನ, ದೇಶಪ್ರೇಮ ಜಾಗೃತಗೊಳಿಸಬೇಕಿದೆ ಎಂದರು.
Related Articles
Advertisement
ನಮ್ಮ ದೇಶಕ್ಕೆ ಪ್ರಮುಖ ನಾಯಕರು ಮಾತ್ರವಲ್ಲ ಜನಸಾಮಾನ್ಯರು ಕೂಡ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಕುಷ್ಟಗಿ ಶಾಸಕರಾದ ಅಮರೇಗೌಡ ಬಯ್ನಾಪುರ ಮಾತನಾಡಿ, ನಾವೆಲ್ಲರೂ ಆ. 15ರಂದು ಮಾತ್ರ ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮಾತನಾಡುತ್ತೇವೆ, ನೆನಪಿಸಿಕೊಳ್ಳುತ್ತೇವೆ. ಆದರೆ ಸ್ವಾತಂತ್ರ್ಯ ಹೋರಾಟವೆಂಬುದು ಒಂದು ದಿನದ ಆಚರಣೆಗೆ ಸೀಮಿತವಾಗದೇ. ಹೋರಾಟಗಾರರ ಶ್ರಮವನ್ನು ಪ್ರತಿನಿತ್ಯ ಸ್ಮರಿಸಬೇಕು. ನಮ್ಮ ಜಿಲ್ಲೆಯ, ತಾಲೂಕಿನ ಪುಂಡಲೀಕಪ್ಪ ಜ್ಞಾನಮೋಠೆ ಅವರು ತಮ್ಮದೇ ತಂಡವನ್ನು ರಚಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅಂತಹ ಹೋರಾಟಗಾರರನ್ನು ಹೊಂದಿರುವುದಕ್ಕೆ ನಾವೆಲ್ಲರೂ ಹೆಮ್ಮೆ ಪಡಬೇಕೆಂದರು.
ಸಂಸದ ಸಂಗಣ್ಣ ಕರಡಿ ಮಾತನಾಡಿ, ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂಬ ಮಾತಿದೆ. ಅದರಂತೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಯುವುದು ಇಂದಿನ ಅವಶ್ಯಕತೆಯಾಗಿದೆ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದ ಹಿನ್ನೆಲೆಯಲ್ಲಿ ಅಂದಿನ ಹೋರಾಟ, ಹೋರಾಟಗಾರರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು, ಮಕ್ಕಳು ಇತಿಹಾಸದ ಬಗ್ಗೆ ಪರೀಕ್ಷಾ ದೃಷ್ಟಿಯಿಂದ ಮಾತ್ರವಲ್ಲ ದೇಶಾಭಿಮಾನದಿಂದಲೂ ತಿಳಿದುಕೊಳ್ಳಬೇಕು. ಪಾಲಕರು ತಮಗೆ ತಿಳಿದಿರುವ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಮಕ್ಕಳಿಗೆ ಹೇಳಿ ಅವರಲ್ಲಿ ದೇಶಾಭಿಮಾನ ಬೆಳೆಸಬೇಕು ಎಂದರು.
ಅಮೃತಭಾರತಿಗೆ ಕನ್ನಡದಾರತಿ ಕಾರ್ಯಕ್ರಮದ ಸ್ಮರಣೆಗಾಗಿ ಸ್ಮರಣ ಫಲಕವನ್ನು ಸಚಿವರು ಬಿಡುಗಡೆಗೊಳಿಸಿದರು. ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಸ್ತುತ ಪಡಿಸಿದ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.
ಸಂಕಲ್ಪ ಸ್ವೀಕಾರ ಕಾರ್ಯಕ್ರಮ: ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ದೇಶದ ಸಾಮರಸ್ಯ, ಸಹೋದರತ್ವ, ಸಂಸ್ಕೃತಿ ಕಾಪಾಡಿಕೊಳ್ಳುವ ಕುರಿತು ಸಂಕಲ್ಪ ಸ್ವೀಕಾರ ಬೋಧಿಸಿದರು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್, ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್, ಎಸ್ಪಿ ಅರುಣಾಂಗ್ಷು ಗಿರಿ, ಎಸಿ ಬಸವಣಪ್ಪ ಕಲಶೆಟ್ಟಿ, ತಹಶೀಲ್ದಾರ್ ವಿಠ್ಠಲ್ ಚೌಗಲೆ, ಡಿಡಿಪಿಐ ಮುತ್ತರೆಡ್ಡಿ ಇ. ರಡ್ಡೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.