Advertisement

ಮಾಧ್ಯಮಗಳು ಮೌಲ್ಯ ಜಾಗೃತಗೊಳಿಸಲಿ

11:59 AM Aug 19, 2018 | Team Udayavani |

ಬೆಂಗಳೂರು: ಮಾಧ್ಯಮಗಳು ಜನರಲ್ಲಿನ ಮಾನವೀಯ ಮೌಲ್ಯಗಳನ್ನು ಜಾಗೃತಗೊಳಿಸಬೇಕು ಎಂದು ಆರ್ಟ್‌ ಆಫ್ ಲೀವಿಂಗ್‌ನ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು. ಭಾರತೀಯ ಕಾರ್ಯನಿತರ ಪತ್ರಕರ್ತರ ಒಕ್ಕೂಟವು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಶನಿವಾರ ಕನಕಪುರ ರಸ್ತೆಯ ಆರ್ಟ್‌ ಆಫ್ ಲೀವಿಂಗ್‌ ಸಂಸ್ಥೆಯಲ್ಲಿ ಆಯೋಜಿಸಿದ್ದ 71ನೇ ರಾಷ್ಟ್ರೀಯ ಮಂಡಳಿ ಸಮಾವೇಶದಲ್ಲಿ ಅವರು ಮಾತನಾಡಿದರು.

Advertisement

ಹೊರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮಾನವೀಯ ಮೌಲ್ಯಗಳು ಇನ್ನೂ ಜೀವಂತವಾಗಿವೆ. ಮಾಧ್ಯಮಗಳು ಮನುಷ್ಯರಲ್ಲಿನ ಆ ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಜಾಗೃತಗೊಳಿಸುವ ಕೆಲಸ ಮಾಡಬೇಕು. ಟಿ.ವಿ.ಮಾಧ್ಯಮಗಳಲ್ಲಿ ಬಿತ್ತರವಾಗುವ ಸುದ್ದಿಗಳು ಜನರ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತವೆ. ಹಾಗಾಗಿ ಬಹಳ ಎಚ್ಚರಿಕೆಯಿಂದ ಮಾಧ್ಯಮಗಳು ಕಾರ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ನಿವೃತ್ತ ಲೋಕಾಯುಕ್ತ ನ್ಯಾ. ಎನ್‌. ಸಂತೋಷ್‌ ಹೆಗ್ಡೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಕಾರ್ಯವೈಖರಿಯ ಕಾವಲುಗಾರನಂತೆ ಮಾಧ್ಯಮ ರಂಗ ಕೆಲಸ ಮಾಡಬೇಕು ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಕುಸಿಯುತ್ತಿವೆ. ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಮಹಾಪ್ರಧಾನ ಕಾರ್ಯದರ್ಶಿ ಪರಮಾನಂದ ಪಾಂಡೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೆೇರಿದಂತೆ ದೇಶದ ನಾನಾ ರಾಜ್ಯಗಳಿಂದ ಆಗಮಿಸಿದ್ದ ಪತ್ರಕರ್ತರು, ಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next