ತಿ.ನರಸೀಪುರ: ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸಂಪರ್ಕ ಸೇತುವೆಯಂತೆ ಕೆಲಸ ಮಾಡುವ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಹೇಳಿದರು.
ಪಟ್ಟಣದಲ್ಲಿ ನೂತನ ತಾಲೂಕು ಪತ್ರಕರ್ತರ ಸಂಘದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾ ಪ್ರಭುತ್ವ ವ್ಯವಸ್ಥೆಯಡಿ ಅಧಿಕಾರ ಹಿಡಿದ ಜನಪ್ರತಿನಿಧಿಗಳು, ಅಧಿಕಾರಿಗಳು ತಮ್ಮ ಕರ್ತವ್ಯ ಸಂದರ್ಭ ಅಧಿಕಾರ ದುರ್ಬಳಕೆ,
ಲೋಪ ಎಸಗುವುದನ್ನು ತಪ್ಪಿಸಿ ಅವರಿಗೆ ಎಚ್ಚರಿಕೆ ನೀಡುವ ಕೆಲಸವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳು ಮಾಡಬೇಕಿದೆ. ಮಾಧ್ಯಮಗಳು ವಸ್ತು ನಿಷ್ಠೆಯಾಗಿ, ನಿಷ್ಪಕ್ಷಪಾತ ಕೆಲಸ ನಿರ್ವಹಿಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಂತಾಗಬೇಕೆಂದರು.
ಕಾರ್ಯಕ್ರಮದಲ್ಲಿ ವಾಟಾಳು ಡಾ.ಶ್ರೀ ಸಿದ್ದಲಿಂಗ ಶಿವಾಚಾರ್ಯಸ್ವಾಮೀಜಿ ಉದ್ಘಾಟಿಸಿದರು. ಶಾಸಕ ಅಶ್ವಿನ್‌ಕುಮಾರ್, ತಾಪಂ ಸದಸ್ಯ ಚೆಲುವರಾಜ್, ಪುರಸಭೆ ಅಧ್ಯಕ್ಷೆ ಉಮೇಶ್, ಪರ್ತಕರ್ತರ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಮಹೇಂದ್ರ,
ಪತ್ರಕರ್ತರ ಸಂಘದ ಮಾಜಿ ಜಿಲ್ಲಾಧ್ಯಕ್ಷ ದೀಪಕ್, ಪ್ರಧಾನ ಕಾರ್ಯದರ್ಶಿ ಲೋಕೇಶ್‌ಬಾಬು, ಖಜಾಂಚಿ ದಕ್ಷಿಣಮೂರ್ತಿ, ಗ್ರಾಮಾಂತರ ಕಾರ್ಯದರ್ಶಿ ಧರ್ಮಪುರ ನಾರಾಯಣ್ ಇತರರು ಹಾಜರಿದ್ದರು.