Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಲೆಮಾರಿ ಜನಾಂಗದವರ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಕುರಿತು ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಾಗೂ ಮೀಸಲಾತಿ ಕಲ್ಪಿಸುವ ಕುರಿತಂತೆ ಹೆಚ್ಚು ಅರಿವು ಮೂಡಿಸಲು ಸಲಹಾ ಸಮಿತಿ ನಿಯಮಾನುಸಾರ ರಚಿಸಬೇಕು. ಸರ್ಕಾರ ಕಲ್ಪಿಸಿರುವ ಸೌಲಭ್ಯ ಪಡೆದುಕೊಳ್ಳಲು ಅಲೆಮಾರಿ ಜನಾಂಗದವರು ಮುಂದಾಗಬೇಕು ಎಂದರು. ಅಲೆಮಾರಿ ಜನಾಂಗದವರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಆಶ್ರಮ ಶಾಲೆ ಕೊಪ್ಪಳ ಜಿಲ್ಲೆಯಲ್ಲಿದ್ದು, ಈ ಆಶ್ರಮದ ಮಕ್ಕಳನ್ನು ವಿಶೇಷ ಕಾಳಜಿಯಿಂದ ನೋಡಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ಆಶ್ರಮದ ಅಗತ್ಯ ಮೂಲಕ ಸೌಕರ್ಯ ಒದಗಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಬೇಕು. ಮಕ್ಕಳ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನ ಜಮೆ ಆಗಿದೆಯೇ ಅಥವಾ ಇಲ್ಲ ಎಂಬುವುದನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅ ಧಿಕಾರಿಗಳು ಪರಿಶೀಲಿಸಬೇಕೆಂದು ಸೂಚನೆ ನೀಡಿದರು.
Related Articles
Advertisement
ಇದಕ್ಕೆ ಸ್ಪಂದಿಸಿದ ಜಲ್ಲಾಧಿಕಾರಿ, ಅಲೆಮಾರಿ ಜನಾಂಗದ ಆಶ್ರಮ ಶಾಲೆ ನಿರ್ಮಾಣಕ್ಕೆ ಅ ಧಿಕಾರಿಗಳು ನಿವೇಶನದ ಲಭ್ಯತೆ ಬಗ್ಗೆ ವರದಿ ಸಲ್ಲಿಸಿಸಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಬಿಸಿಎಂ ಜಿಲ್ಲಾ ಅಧಿಕಾರಿ ಜಿ.ಎಂ. ದೊಡ್ಡಮನಿ ಮಾತನಾಡಿ, ಅಲೆಮಾರಿ ಜನಾಂಗದ ಆಶ್ರಮ ಶಾಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿದೆ. ಈ ಆಶ್ರಮ ಶಾಲೆಯಲ್ಲಿ 1ರಿಂದ 5ನೇ ತರಗತಿಯ 120 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 2021-22ನೇ ಸಾಲಿಗಾಗಿ ಕಳೆದ ಸಾಲಿನಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಿದ ಅಲೆಮಾರಿ ಜನಾಂಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳನ್ನು ಈ ವರ್ಷದ ನವೀಕರಣ ವಿದ್ಯಾರ್ಥಿಗಳೆಂದು ಪರಿಗಣಿಸಿ, ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುವುದು.
ಅಲೆಮಾರಿ ಜನಾಂಗದ ನಿವೇಶನ ರಹಿತ ಕುಟುಂಬದವರಿಗೆ ನಿವೇಶನ ಒದಗಿಸಲು ಕೊಪ್ಪಳ ತಾಲೂಕಿನ ಹೊಸೂರು, ಯಲಬುರ್ಗಾ ತಾಲೂಕಿನ ಹುಲೇಗುಡ್ಡ, ಕುಷ್ಟಗಿ ತಾಲೂಕಿನ ಬಚಿನಾಳ ಹಾಗೂ ಗುಡ್ಡದ ಹನುಮಸಾಗರ ಸೇರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಜಮೀನು ಖರೀದಿಸಿದೆ, ನಿವೇಶನ ಹಂಚಿಕೆ ಮಾಡಬೇಕಿದೆ ಎಂದರು.
ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ಟಿ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗಂಗಪ್ಪ, ಶಿವಶಂಕರ ಕರಡಕಲ್, ಬಿಸಿಎಂ ಪತ್ರಾಂಕಿತ ವ್ಯವಸ್ಥಾಪಕ ಬಿ.ವಿ. ಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.