Advertisement
ಪಟ್ಟಣದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಡಿಒಗಳು ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಿ ಎಂದರು.
Related Articles
Advertisement
ಜಿಪಂ ಸದಸ್ಯರು ಹೇಳುವ ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಕಡ್ಡಾಯವಾಗಿ ಜಿಪಂ ಸದಸ್ಯರೊಂದಿಗೆ ಭೇಟಿ ನೀಡಿ ತುರ್ತಾಗಿ ಕುಡಿವ ನೀರಿನ ಸಮಸ್ಯೆ ಹೋಗಲಾಡಿಸಲು ಮುಂದಾಗಬೇಕು ಎಂದು ಕುಡಿಯುವ ನೀರು ನೈರ್ಮಲ್ಯ ಎಇಇ ತಿರುಕನಗೌಡ ಅವರಿಗೆ ಸೂಚಿಸಿದರು.
ಶಾಲೆಗೆ ಭೇಟಿ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗುವ ಕಾರ್ಯ ಮಾಡಿ ಎಂದು ಬಿಇಒ ಶರಣಪ್ಪ ವಟಗಲ್ ಅವರಿಗೆ ಸೂಚಿಸಿದರು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಪ್ಪ ಮರಕಟ್ ಮಾತನಾಡಿ, ಬೋದೂರು ಗ್ರಾಮದಲ್ಲಿ ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಕುಡಿವ ನೀರಿನ ಸಮಸ್ಯೆ ಇದೆ. ಹೀಗಾಗಿ ಬಿಸಿಯೂಟ ತಯಾರಿಸಲು ತೊಂದರೆಯಾಗುತ್ತಿದೆ ಎಂದರು. ಬೋದೂರು ಶಾಲೆಯಲ್ಲಿ ಕುಡಿವ ನೀರಿನ ಸಮಸ್ಯೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಬಿಇಒ ಹೇಳುತ್ತಿದ್ದಂತೆ ಜಿಪಂ ಅಧ್ಯಕ್ಷರು ಬಿಇಒ ಅವರನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು. 14ನೇ ಹಣಕಾಸು ಯೋಜನೆ ಕ್ರಿಯಾಯೋಜನೆಗೆ ತಾಲೂಕಿನ 36 ಗ್ರಾಪಂಗಳ ಪೈಕಿ ಒಂದೇ ಗ್ರಾಪಂನವರು ಅನುಮೋದನೆ ಪಡೆದಿದ್ದಾರೆ. ಉಳಿದ ಗ್ರಾಪಂನವರು ಕ್ರಿಯಾಯೋಜನೆ ತಯಾರಿಸಿಕೊಂಡು ಅನುಮೋದನೆ ಪಡೆದು ಕುಡಿವ ನೀರು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಲು ಮುಂದಾಗಿ ಎಂದು ಜಿಪಂ ಸಿಇಒ ಆರ್.ಎಸ್. ಪೆದ್ದಪ್ಪಯ್ಯ ಅವರು ಪಿಡಿಒಗಳಿಗೆ ಸೂಚಿಸಿದರು. ತಾಪಂ ಅಧ್ಯಕ್ಷೆ ಲಕ್ಷ್ಮೀ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಜಿಪಂ ಸದಸ್ಯರಾದ ಪ್ರೇಮಾ ಕುಡಗುಂಟಿ, ನೀಲಮ್ಮ ಭಾವಿಮನಿ ಹಾಗೂ ಅಧಿಕಾರಿಗಳಿದ್ದರು.