Advertisement

ಪೊಲೀಸ್‌ ವರ್ಗಾವಣೆ ಪಿಇಬಿ ನಿರ್ವಹಿಸಲಿ

07:25 AM Aug 19, 2017 | Team Udayavani |

ಬೆಂಗಳೂರು: ಪೊಲೀಸ್‌ ಅಧಿಕಾರಿಗಳ ವರ್ಗಾವಣೆಯನ್ನು ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಬೋರ್ಡ್‌ ಮಾತ್ರವೇ ನಿರ್ವಹಿಸುವಂತೆ ನೋಡಿಕೊಳ್ಳಬೇಕೆಂದು ಹೈಕೋರ್ಟ್‌ ರಾಜ್ಯಸರ್ಕಾರಕ್ಕೆ ನಿರ್ದೇಶಿಸಿದೆ. 

Advertisement

ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ, ಶಾಸಕರು, ಸಂಸದರು ಹಸ್ತಕ್ಷೇಪ ಮಾಡುತ್ತಿದ್ದು, ತಮಗೆ ಬೇಕಾದ ಅಧಿಕಾರಿಗಳನ್ನು ಆಯಕಟ್ಟಿನ ಜಾಗಗಳಿಗೆ ವರ್ಗಾವಣೆ ಮಾಡಲು ಶಿಫಾರಸು ಮಾಡುತ್ತಾರೆಂದು ಆಕ್ಷೇಪಿಸಿ ರಾಜ್ಯ ಪೊಲೀಸ್‌ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಗೊಳಿಸಿರುವ ಹೈಕೋರ್ಟ್‌ ಈ ನಿರ್ದೇಶನ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next