Advertisement

ಯೋಜನೆ ಲಾಭ ಫಲಾನುಭವಿಗಳಿಗೆ ಸಿಗಲಿ

09:47 AM Jun 19, 2022 | Team Udayavani |

ಅಫಜಲಪುರ: ಯಾವುದೇ ಪಕ್ಷದ ಸರ್ಕಾರಗಳಿದ್ದರೂ ಕೂಡ ಅವುಗಳು ಜನಕಲ್ಯಾಣಕ್ಕಾಗಿ ರೂಪಿಸುವ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಿಗುವಂತಾಗಬೇಕು ಎಂದು ಶಾಸಕ ಎಂ.ವೈ. ಪಾಟೀಲ್‌ ಹೇಳಿದರು.

Advertisement

ತಾಲೂಕಿನ ಬಳೂರ್ಗಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಜನರು ತಮ್ಮ ಕೆಲಸಗಳಿಗಾಗಿ ನಿತ್ಯ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ತಿರುಗಾಡಿ ಸುಸ್ತಾಗುತ್ತಾರೆ. ಅನೇಕ ಸಲ ಸರ್ಕಾರಿ ಕೆಲಸಗಳಾಗದೆ ಬೇಸತ್ತು ಹೋಗುತ್ತಾರೆ. ಅಂತವರಿಗೆಲ್ಲ ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದರು.

ಸರ್ಕಾರದ ಯೋಜನೆಗಳು ಸಫಲವಾಗಲು ಮತ್ತು ಅರ್ಹ ಫಲಾನುಭವಿಗಳಿಗೆ ತಲುಪಲು ಇಂತಹ ಕಾರ್ಯಕ್ರಮಗಳ ಅವಶ್ಯವಿದೆ. ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಜಿಲ್ಲಾಡಳಿತವನ್ನೇ ಜನರ ಮನೆ ಬಾಗಿಲಿಗೆ ಕಳುಹಿಸುತ್ತಿರುವುದು ಒಳ್ಳೆಯದು. ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರ ಪಠ್ಯಪುಸ್ತಕದ ಗೊಂದಲ ಸೃಷ್ಟಿಸುವ ಬದಲಾಗಿ ಸೃಷ್ಟಿಯಾಗಿರುವ ಗೊಂದಲವನ್ನು ಸರಿಪಡಿಸಿ ಮಕ್ಕಳಿಗೆ ಉತ್ತಮ ಪಠ್ಯ ನೀಡಬೇಕೆಂದು ಸಲಹೆ ನೀಡಿದರು.

ತಹಶೀಲ್ದಾರ್‌ ಸಂಜೀವಕುಮಾರ ದಾಸರ್‌ ಮಾತನಾಡಿ, ಪ್ರತಿ ತಿಂಗಳ ಮೂರನೇ ಶನಿವಾರ ಸರ್ಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ. ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಯೋಜನೆ ಇದಾಗಿದೆ. ಜೂನ್‌ 21ರಂದು ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ ಕಚೇರಿಗೆ ಬಂದು ಜನಸಾಮಾನ್ಯರ ಸಮಸ್ಯೆ ಆಲಿಸಲಿದ್ದಾರೆ. ಹೀಗಾಗಿ ಏನಾದರೂ ಸರ್ಕಾರದ ಮಟ್ಟದ ಸಮಸ್ಯೆಗಳಿದ್ದರೆ ಸಾರ್ವಜನಿಕರು ಸರಿಪಡಿಸಿಕೊಳ್ಳಿ ಎಂದು ಮನವಿ ಮಾಡಿದರು.

Advertisement

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಭಾಗ್ಯಲಕ್ಷ್ಮೀ ಬಾಂಡ್‌, ಆರೋಗ್ಯ ಇಲಾಖೆಯ ಆಯುಷ್ಮಾನ್‌ ಕಾರ್ಡ್‌, ಕಂದಾಯ ಇಲಾಖೆಯ ಪಹಣಿ ತಿದ್ದುಪಡಿ, ಸ್ತ್ರೀಶಕ್ತಿ ಸಂಘಗಳಿಗೆ ಅಮೃತ ಯೋಜನೆ ಅಡಿಯಲ್ಲಿ 51 ಸಂಘಗಳಿಗೆ 1 ಲಕ್ಷ ರೂಪಾಯಿ ಸಹಾಯಧನ ಚೆಕ್‌ ವಿತರಣೆ ಮಾಡಲಾಯಿತು. ಗ್ರಾಪಂ ಅಧ್ಯಕ್ಷೆ ಮುಕ್ತಾಬಾಯಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಅಧಿ ಕಾರಿಗಳಾದ ಮೀನಾಕ್ಷಮ್ಮ ಪಾಟೀಲ್‌, ಸುರೇಂಧ್ರನಾಥ, ಎಸ್‌.ಎಚ್‌. ಗಡಿಗಿಮನಿ, ಡಾ| ರತ್ನಾಕರ ತೋರಣ, ಸಿದ್ದರಾಮ ಅಜಗೊಂಡ, ರಮೇಶ ಪಾಟೀಲ್‌, ಚೇತನ ಗುರಿಕಾರ, ಮಲ್ಲಿಕಾರ್ಜುನ ಹಿಟ್ನಳ್ಳಿ, ಮಹಾಂತೇಶ ಬಡದಾಳ, ಮನೋಹರ ರಾಠೊಡ, ಫಲಾಲಸಿಂಗ್‌ ರಾಠೊಡ, ಶಿವಾನಂದ ಗಾಡಿ, ಅರವಿಂದ ದೊಡ್ಮನಿ ಸೇರಿದಂತೆ ಗ್ರಾಮಸ್ಥರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next