Advertisement

ರಸ್ತೆ ಸುಧಾರಣೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

02:22 PM Jun 19, 2022 | Team Udayavani |

ವಿಜಯಪುರ: ರಸ್ತೆ ಸುಧಾರಣೆ ಕಾಮಗಾರಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ, ಹೀಗಾಗಿ ಕಾಮಗಾರಿ ಅಚ್ಚುಕಟ್ಟಾಗಿ ನಡೆಯಬೇಕು. ಗುಣಮಟ್ಟದಲ್ಲಿ ಲೋಪವಾಗದಂತೆ ಗುತ್ತಿಗೆದಾರರಿಗೆ ಉತ್ತಮ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಸೂಚಿಸಿದರು.

Advertisement

ತಿಕೋಟಾ ತಾಲೂಕಿನ ಕನಮಡಿ ಗ್ರಾಮದಿಂದ ಧರಿದೇವರ ಗುಡ್ಡದವರೆಗಿನ 4.25 ಕಿ.ಮೀ. ದೂರದ ರಸ್ತೆ ಸುಧಾರಣೆಗೆ ಅಂದಾಜು 4 ಕೋಟಿ ರೂ. ವೆಚ್ಚದದಲ್ಲಿ ತಮ್ಮ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರಿಗಳು ಕಾಲ ಕಾಲಕ್ಕೆ ಪರಿಶೀಲನೆ ನಡೆಸಬೇಕು. ಕಾಮಗಾರಿ ಗುಣಮಟ್ಟ ಮತ್ತು ಕಾಲಮಿತಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಮಾತನಾಡಿ, ಜನರ ನಿರೀಕ್ಷೆಗೆ ತಕ್ಕಂತೆ ಸದೃಢ ರಸ್ತೆ ನಿರ್ಮಾಣಕ್ಕೆ ಒತ್ತು ಕೊಡಬೇಕು ಎಂದು ತಿಳಿಸಿದರು.

ತಿಕೋಟಾ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ತಿಕೋಟಾ ತಹಶೀಲ್ದಾರ್‌ ಎಂ.ಎಸ್‌.ಅರಕೇರಿ, ಲೋಕೊಪಯೋಗಿ ಇಲಾಖೆ ಇಇ ಸಿ.ಬಿ.ಚಿಕ್ಕಲಕಿ, ಜೆಇ ರಾಜು ಮುಜಮದಾರ ವೇದಿಕೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next