Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ 885 ಹಳ್ಳಿ, 56 ತಾಲೂಕು ನೆರೆಗೆ ಸಿಲುಕಿವೆ. 33 ಸಾವಿರ ಮನೆಗಳಿಗೆ ಹಾನಿಯಾಗಿದ್ದು, 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. 3500 ಕಿ.ಮಿ ರಸ್ತೆ, 393 ಕಟ್ಟಡಗಳು, 250, ಸೇತುವೆ 104 ಸಣ್ಣ ನಿರಾವರಿ ಕೆರೆಗಳು ಹಾಳಾಗಿವೆ. ಎಲೆಕ್ಟ್ರಿಕಲ್ ಟ್ರಾನ್ಸ್ ಫಾರ್ಮರ್ ಕೆಟ್ಟುಹೋಗಿದೆ.
Related Articles
Advertisement
ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿ ಹಾಗೂ ಗೃಹ ಸಚಿವರನ್ನು ಭೇಟಿ ಮಾಡಿ ತಕ್ಷಣ 5 ಸಾವಿರ ಕೋಟಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹೇರಬೇಕು. ರಾಜ್ಯದ ಸಂಸದರು ಅಂಜುಬುರುಕ ಸಂಸದರು ಇದ್ದಾರೆ. ಇವರನ್ನು ಆಯ್ಕೆ ಮಾಡಿ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯದಿಂದ ಆಯ್ಕೆಯಾಗಿದ್ದಾರೆ. ಅವರು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಅವರನ್ನು ರಾಜ್ಯದಿಂದ ಆಯ್ಕೆ ಮಾಡಬೇಕಾ? ಎಂದು ಪ್ರಶ್ನಿಸಿದರು.
ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷದ ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸಿದ್ದೇವೆ. ಕೋವಿಡ್ ಸಂದರ್ಭದಲ್ಲಿಯೂ ಕಾಂಗ್ರೆಸ್ ಜನರ ಸಮಸ್ಯೆಗೆ ಸ್ಪಂದಿಸಿದ್ದೇವೆ. ಅಧಿವೇಶನ ಸಂದರ್ಭದಲ್ಲಿ ಜನರಿಗೆ ಹೆಚ್ಚಿನ ಪರಿಹಾರ ಒದಗಿಸುವಂತೆ ಆಗ್ರಹಿಸಲಾಗುವುದು ಎಂದರು.
ಪ್ರಿಯಾಂಕ್ ಖರ್ಗೆ ಮಾತನಾಡಿ, ಸಚಿವರು ಪ್ರಧಾನಿ ಸಂಚಾರದಲ್ಲಿ 10 ಸಾವಿರ ಕೋಟಿ ನಷ್ಟವಾಗಿದೆ ಎಂದು ಹೇಳಿದ್ದರು. ಅಲ್ಲದೆ ಸರ್ಕಾರದ ಬಳಿ ಹಣ ಇದೆ ಎಂದು ಹೇಳಿದ್ದರು. ಆದರೆ, ಮುಖ್ಯಮಂತ್ರಿ ಕೋವಿಡ್ ನಿಂದ ಆರ್ಥಿಕ ಸಂಕಷ್ಟ ಇದೆ ಎಂದು ಹೇಳಿದ್ದಾರೆ. ಇನ್ನೂ ಸಮೀಕ್ಷೆ ಮಾಡಬೇಕು, ಕೇಂದ್ರಕ್ಕೆ ನೆರವಿಗೆ ಮನವಿ ಮಾಡುವುದಾಗಿ ಹೇಳಿದ್ದಾರೆ.
ಆಪರೇಷನ್ ಕಮಲ ಮಾಡುವಾಗ ಇರುವ ಸಮನ್ವಯತೆ ಈಗೇಕಿಲ್ಲ. ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದಿಂದ ಆಯ್ಕೆ ಮಾಡಿದ್ದಾರೆ. ಅವರು ರಾಜ್ಯದ ಋಣ ತೀರಿಸುವುದು ಯಾವಾಗ? ಹಣಕಾಸು ಸಚಿವರು ರಾಜ್ಯದ ಜನರ ಋಣ ತೀರಿಸಲು 25 ಸಾವಿರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ. ರಾಜ್ಯದ ಸಂಸದರು ಚಾಂದನಿ ಚೌಕ್ ನಲ್ಲಿ ಚಾಟ್ಸ್ ತಿನ್ನೋಕೆ ಮಾತ್ರ ಇದ್ದಾರೆ. ಇವರನ್ನು ಆಯ್ಕೆ ಮಾಡಿದ ಜನ ಪರಿತಪಿಸುತ್ತಿದ್ದಾರೆ ಎಂದರು.