Advertisement
ಜಲ ವಿವಾದಗಳ ಕುರಿತು ನಡೆದ ಸರ್ವ ಪಕ್ಷ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನೂ ಮನ್ನಾ ಮಾಡಿವೆ. ಅದೇ ರೀತಿ ರಾಜ್ಯ ಸರ್ಕಾರವೂ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುವುದನ್ನು ರಾಜ್ಯ ಸರ್ಕಾರ ಕೈ ಬಿಡಬೇಕು’ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಕ್ಕೆ ದೊರೆಯುತ್ತಿದ್ದ ಅನುದಾನದಲ್ಲಿ ಶೇ.10 ರಷ್ಟು ಹೆಚ್ಚಳ ಮಾಡಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಮೊದಲು ಶೇ.32ರಷ್ಟು ಕೇಂದ್ರದ ಅನುದಾನ ಬರುತ್ತಿತ್ತು. ಈಗ ಶೇ.42ಕ್ಕೆ ಹೆಚ್ಚಳವಾಗಿದೆ ಎಂದು ಹೇಳಿದರು.
ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯವರು ಈಗ ಕೇಂದ್ರ ಸರ್ಕಾರ ಸಾಲಮನ್ನಾ ಮಾಡಲು ಬರುವುದಿಲ್ಲ ಎನ್ನುತ್ತಾರೆ. ನಾವು ನಮ್ಮ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲ ಮನ್ನಾ ಮಾಡಲೇಬೇಕು ಎಂದು ಆಗ್ರಹಿಸಿದರು. ಅಮಿತ್ ಶಾಗೆ ನೈತಿಕತೆ ಇಲ್ಲ
“ರಾಜ್ಯ ಸರ್ಕಾರದ ಬಗ್ಗೆ ಆರೋಪ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ನೈತಿಕತೆ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ನಮ್ಮ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೇ ಜನಪರ ಆಡಳಿತ ನಡೆಸಿಕೊಂಡು ಬಂದಿದೆ. ಅವರು ಭ್ರಷ್ಟಾಚಾರಿಗಳ ಜತೆ ಕುಳಿತು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.