Advertisement

“ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಲಿ’

06:10 AM Jul 29, 2017 | Harsha Rao |

ಪೆರ್ಲ: ಮಾನವ ನಿಜವಾದ ಮನುಷ್ಯನಾಗುವುದು ಸಮಾಜ ಸೇವೆಯಿಂದ. ಒಬ್ಬ ವ್ಯಕ್ತಿ ಸಮರ್ಥನಾಗಿ ಬೆಳೆಯಲು ಸಮಾಜದಿಂದ ಸಾಕಷ್ಟು ಪಡೆದುಕೊಳ್ಳುತ್ತಾನೆ. ಅದೇ ರೀತಿ ತನ್ನನ್ನು ಗುರುತಿಸಿ ಕೊಳ್ಳಬೇಕಾದರೆ ಸಮಾಜಕ್ಕೆ ಅರ್ಪಿಸಿಕೊಳ್ಳಬೇಕು. ನಾವು ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸಿ ಜೀವನದಲ್ಲಿ  ಉಳಿಸಿ ಕೊಂಡರೆ ಮಾತ್ರ ಬದುಕು ಸಾರ್ಥಕ ವಾಗುವುದು ಎಂದು ಎನ್‌.ಎಸ್‌.ಎಸ್‌. ರಾಜ್ಯ ಪ್ರಶಸ್ತಿ ಪುರಸ್ಕೃತ ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಪ್ರೊಫೆಸರ್‌ ಎ. ಶ್ರೀನಾಥ್‌ ಅವರು ಪೆರ್ಲ ನಾಲಂದಾ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಎನ್‌.ಎಸ್‌.ಎಸ್‌.ನ ಮಹತ್ವದ ಬಗ್ಗೆ ಅರಿವು ಮೂಡಿಸಿದರು. 

Advertisement

ಆಧುನಿಕ ಯುಗದಲ್ಲಿ ಮಾನವ ಯಾಂತ್ರಿಕನಾಗುತ್ತಾ ಸ್ವಾರ್ಥಿಯಾಗುತ್ತಿದ್ದಾನೆ. ಮಾನವೀಯತೆ, ಬಂಧುತ್ವಗಳ ಅರ್ಥ ಕ್ಷೀಣಿಸುತ್ತಿದೆ. ಅಂತಹಾ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಸಮರ್ಪಣಾ ಭಾವ ಮೂಡಿಸಲು ರಾಷ್ಟ್ರೀಯ ಸೇವಾ ಯೋಜನೆ  ಅಗತ್ಯ ಪಾಠದ ಜೊತೆಗೆ ಸಾಧ್ಯವಾದಷ್ಟು ಸಮಾಜಸೇವೆ ಮಾಡಿ ಜೀವನ ಸಾರ್ಥಕಗೊಳಿಸೋಣ ಎಂದವರು ಹೇಳಿದರು.

ಕಾಲೇಜಿನ ಆಡಳಿತಾಧಿಕಾರಿ ಕೆ. ಶಿವಕುಮಾರ್‌ ಅವರು ಮಾತನಾಡುತ್ತ ಮರ, ಗಿಡ, ಪ್ರಾಣಿ, ಪಕ್ಷಿಗಳು ಹೇಗೆ ಪರರಿಗಾಗಿ ಜೀವಿಸುತ್ತವೋ ಹಾಗೆಯೇ ಬುದ್ಧಿವಂತನಾದ ಮಾನವನೂ ತನ್ನ ದೇಹವನ್ನು ಸಮಾಜಕ್ಕೆ ಸಮರ್ಪಿಸಿಕೊಳ್ಳಬೇಕು ಎಂದರು. ಸ್ಟಾಫ್‌ ಕಾರ್ಯದರ್ಶಿ ಕೆ. ಕೇಶವ ಶರ್ಮ ಶುಭ ಹಾರೈಸಿದರು. ಕಾಲೇಜು ಪ್ರಾಂಶುಪಾಲ ಪ್ರೊ| ಪಿ. ಶಂಕರನಾರಾಯಣ ಹೊಳ್ಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಹಿಸಿದರು. ಕಾಲೇಜಿನ ಎನ್‌.ಎಸ್‌.ಎಸ್‌. ಯೋಜನಾಧಿಕಾರಿ ಉಪನ್ಯಾಸಕ ಶಂಕರ ಖಂಡಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ನಯನಾ ವಂದಿಸಿದರು. ವಿದ್ಯಾರ್ಥಿ ವಿಕಾಸ್‌ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next