Advertisement

ತಹಶೀಲ್ದಾರರು ಜಾಗರೂಕರಾಗಿ ಕಾರ್ಯ ನಿರ್ವಹಿಸಲಿ

06:36 AM May 14, 2020 | Lakshmi GovindaRaj |

ಹಾಸನ: ಜೆಲ್ಲೆಯಲ್ಲಿ ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹೆಚ್ಚಿನ ಜಾಗರೂಕತೆ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು  ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಸೂಚಿಸಿದರು.

Advertisement

ಡೀಸಿ ಕಚೇರಿಯಲ್ಲಿ ಎಲ್ಲಾ ತಾಲೂಕುಗಳ ತಹಶೀ ಲ್ದಾರರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಹೊರ ರಾಜ್ಯಗಳಿಂದ ಬರುವವರನ್ನು ಚೆಕ್‌ಪೋಸ್ಟ್‌ಗಳ ಲ್ಲಿಯೇ ತಡೆದು  ಕ್ವಾರಂಟೈನ್‌ಗೆ ಕಳುಹಿಸಬೇಕು. ತಹಶೀ ಲ್ದಾರರು ಪ್ರತಿದಿನ ಚೆಕ್‌ಪೋಸ್ಟ್‌ಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.

ಪ್ರತಿ ತಾಲೂಕಿನಲ್ಲಿ 2 ಹೋಟೆಲ್‌ಗ‌ಳನ್ನು ಹೋಂ ಕ್ವಾರಂಟೈನ್‌ ಮಾಡಬಹುದಾದ  ಸ್ಥಳಗಳೆಂದು ಗುರುತಿಸ ಬೇಕು. ಪರಸ್ಥಳಗಳಿಂದ ಬಂದವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಸ್ಥಳದಲ್ಲಿ ಕ್ವಾಂರಂಟೈನ್‌ ಇರಲು ಇಚ್ಛಿಸದಿದ್ದಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಿ ಹೋಟೆಲ್‌ಗ‌ಳಲ್ಲಿ ಹೋಂ ಕ್ವಾರಂಟೈನ್‌ ಆಗಲು  ವ್ಯವಸ್ಥೆ ಮಾಡಬೇಕು ಎಂದರು.

ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಚನ್ನರಾಯ ಪಟ್ಟಣ ಶಾಸಕ ಸಿ.ಎನ್‌. ಬಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿ ಯಾಗುತ್ತಿರುವುದರಿಂದ ಆರೋಗ್ಯ  ಇಲಾಖೆ ಸಿಬ್ಬಂದಿಗೆ ಕಡ್ಡಾಯವಾಗಿ ಆರೋಗ್ಯ ಸುರಕ್ಷತಾ ಪರಿಕರಗಳನ್ನು ನೀಡಬೇಕು ಎಂದು ಹೇಳಿದರು. ಎಸ್ಪಿ ಆರ್‌. ಶ್ರೀನಿವಾಸ್‌ ಗೌಡ ಅವರು ಮಾತನಾಡಿ, ಚೆಕ್‌ಪೋಸ್ಟ್‌ಗಳಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಚಾಲಕರನ್ನು  ಹೊರತುಪಡಿಸಿ ಬೇರೆ ಯಾರೇ ಬಂದರೂ ಅವರನ್ನು ತಡೆದು ಪರಿಶೀಲಿಸಿ ಹೋಂ ಕ್ವಾರಂಟೈನ್‌ಗೆ ಕಳುಹಿಸಬೇಕು.

ಚೆಕ್‌ಪೋಸ್ಟ್‌ಗಳಲ್ಲಿ ಸೇವಾ ಸಿಂಧು ಪಾಸ್‌ ಇಲ್ಲದವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸ ಬೇಕೆಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಬಿ.ಎ. ಪರಮೇಶ್‌, ಎಡೀಸಿ ಕವಿತಾ ರಾಜರಾಂ, ನಗರಾಭಿವೃದಿಟಛಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್‌, ತಹಶೀಲ್ದಾರ್‌ ಶಿವಶಂಕರಪ್ಪ ಮತ್ತಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next