Advertisement
ಅವರು ರವಿವಾರ ಯಮಕನಮರಡಿ ಎನ್ ಎಸ್‌ಎಫ್ ಶಾಲಾ ಆವರಣದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 10ನೇ ಸತೀಶ್ ಪ್ರತಿಭಾ ಪುರಸ್ಕಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಹತ್ತರಗಿಯ ಹರಿಮಂದಿರದ ಆನಂದ ಮಹಾರಾಜ ಗೋಸಾವಿ ಮಾತನಾಡಿ, ಸತೀಶ ಪ್ರತಿಭಾ ಪುರಸ್ಕಾರ ನೋಡಿ ಸಂತೋಷ ಆಗುತ್ತಿದೆ. ಕಲೆಗಳನ್ನು ಗೌರವಿಸಿ, ಕಲಾವಿದರನ್ನು ಪೋಷಿಸುವ ಕೆಲಸ ಮಾಡುತ್ತಿರುವ ಸಚಿವ ಸತೀಶ ಜಾರಕಿಹೊಳಿ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.
ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಾನಪದ ಕಲೆಗಳು ನಶಿಸಿ ಹೋಗುವ ಕಾಲದಲ್ಲಿ ಜನಪದ ಕಲೆಯನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಸಚಿವ ಸತೀಶ ಆದ್ಯತೆ ನೀಡುತ್ತಿದ್ದಾರೆ. ಪಾಲಕರು ಕನ್ನಡ ಉಳಿವಿಗಾಗಿ ಆದ್ಯತೆ ನೀಡಬೇಕು. ಸ್ವದೇಶಿ ಸಂಸ್ಕೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಕರೆ ನೀಡಿದರು.
ಹುಕ್ಕೇರಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸತ್ಕರಿಸಿದರು. ಇದೇವೇಳೆ ಹುಕ್ಕೇರಿ ತಾಲೂಕಿನ ಸಾಧಕರಾದ ಕೆಂಪಣ್ಣಾ ಬಿಸಿರೊಟ್ಟಿ, ಸುಜಾತಾ ಹೆದ್ದಾಳಿ, ರಶೀಕಾ ಮೇತಾಳ, ಬಸವಣ್ಣಿ ಗುಡಸ, ಬಿ.ಹತನೂರಿ ಇವರನ್ನು ಶ್ರೀಗಳು, ಗಣ್ಯರು ಸತ್ಕರಿಸಿದರು. ಶಾಸಕರಾದ ಗಣೇಶ ಹುಕ್ಕೇರಿ, ರಾಜು ಸೇಠ್ ವಿಶ್ವಾಸ ವೈದ್ಯ, ಬಾಬಾ
ಸಾಹೇಬ ಪಾಟೀಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಕಾಂಗ್ರೆಸ್ ಮುಖಂಡರಾದ ಕಿರಣ ರಜಪೂತ, ತಾಪಂ ಮಾಜಿ ಅಧ್ಯಕ್ಷ ಸುರೇಶ ಬೆಣ್ಣಿ, ದಯಾನಂದ ಪಾಟೀಲ, ಶಶಿ ಹಟ್ಟಿ, ಮಹಾದೇವ ಪಟೋಳಿ, ಆನಂದಸ್ವಾಮಿ ತವಗಮಠ, ಈರಣ್ಣಾ ಬಿಸಿರೊಟ್ಟಿ, ರವಿ ಜಿಂಡ್ರಾಳಿ, ದಸ್ತಗೀರ ಬಸಾಪೂರಿ ಸೇರಿದಂತೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ
ಶಿಕ್ಷಕರು, ಅಪಾರ ಸಂಖ್ಯೆಯ ಸಾರ್ವಜನಿಕರು ಪಾಲ್ಗೊಂಡಿದ್ದರು. ಶಿಕ್ಷಕ ಎ.ಜಿ.ಕೋಳಿ ನಿರೂಪಿಸಿ, ವಂದಿಸಿದರು.