Advertisement
ನಗರದಲ್ಲಿ ನೂತನವಾಗಿ ನಿರ್ಮಿಸಿದ ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಕೆ. ಹರಿಪ್ರಸಾದ ಅವರ ವಿಧಾನ ಪರಿಷತ್ ನಿಧಿ ಯಲ್ಲಿ ಈ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡ ಏಡ್ಸ್ ಸೋಂಕಿತ ಮಹಿಳೆಯರು ಒಂದೆಡೆ ಸೇರಿ ತಮ್ಮ ಸಮಸ್ಯೆ ಚರ್ಚಿಸಲು ಮತ್ತು ವಾಸ್ತವ್ಯವಿರಲು ಅನುಕೂಲವಾಗಿದೆ ಎಂದರು.
Related Articles
Advertisement
ಸಾವಿತ್ರಿಬಾಯಿ ಫುಲೆ ಮಹಾರಾಷ್ಟ್ರದ ಪುಣೆಯಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡಬೇಕೆಂಬ ನಿರ್ಧಾರ ಮಾಡಿದಾಗ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳು ಕೇಳಿ ಬಂದವು. ಆ ಆರೋಪ, ದಬ್ಟಾಳಿಕೆಗೆ ಹೆದರದೇ ಅವರು ಮಹಿಳೆಯರಿಗೆ ಶಿಕ್ಷಣ ನೀಡಿ ಸಮಾಜಕ್ಕೆ ಆದರ್ಶವಾದರು ಎಂದರು.
ಸಮಾಜದಲ್ಲಿ ಅನೇಕ ಸಮಸ್ಯೆಗಳಿವೆ. ಆದರೆ ಅವುಗಳಿಗೆ ಸ್ಪಂದಿಸದೇ ಬಿಜೆಪಿ ಸರ್ಕಾರ ಗೋ ಹತ್ಯೆ ಮಾಡಬೇಡಿ, ಮಾಂಸ ತಿನ್ನಬೇಡಿ, ಮತಾಂತರ ಮಾಡಬೇಡಿ ಎಂದು ಹೇಳುತ್ತಿದೆ. ಆದರೆ ಯುವಕರಿಗೆ ಉದ್ಯೋಗ ನೀಡಲು ಆಶಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಂತಹ ನಾಯಕ ಸಿಕ್ಕಿದ್ದು ಅದೃಷ್ಟ. ಅವರ ನೇತೃತ್ವದಲ್ಲಿ ಅನೇಕ ಕಾರ್ಯಕ್ರಮ ಜರುಗಲಿದ್ದು,ಅವುಗಳಲ್ಲಿ ತಪ್ಪದೇ ಭಾಗಿಯಾಗಬೇಕು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಏಡ್ಸ್ ನಿಯಂತ್ರಣಕ್ಕಾಗಿ ಆಸ್ಕರ್ ಫರ್ನಾಂಡಿಸ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನಿಂದ ಕಮಿಟಿ ರಚಿಸಿ,ದೊಡ್ಡ ಮಟ್ಟದ ಸಮ್ಮೇಳನ ಮಾಡಿ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಸಚಿವ ಆರ್.ಎಂ. ಪಾಟೀಲ್,ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಸ್ಥೆ ಅಧ್ಯಕ್ಷೆ ಲಲಿತಾ ಹೊಸಮನಿ, ಲೀಲಾ ಸಂಪಗಿ ಸೇರಿದಂತೆ ಸಂಸ್ಥೆ ಸದಸ್ಯರು ಇದ್ದರು. ಜಯರಾಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಅನಿಷ್ಟ ಪದ್ಧತಿ ಬಿಟ್ಟು ದೇವದಾಸಿಯರು ಒಂದಾದರೆ ಮುಂದಿನ ದಿನಗಳಲ್ಲಿ ಎನ್‌ಜಿಒ ಮೂಲಕ ಉದ್ಯೋಗ ಕಲ್ಪಿಸಲಾಗುವುದು. ಮೂಢನಂಬಿಕೆ ಬಿಟ್ಟು ಬದುಕಬೇಕು. ಆಗ ಮಾತ್ರ ಆರ್ಥಿಕ ಪ್ರಗತಿ ಕಾಣಲು ಸಾಧ್ಯ. ಶಕ್ತಿ ಏಡ್ಸ್ ಸಂಘದ ಸದಸ್ಯರು ಈಗಾಗಲೇ ನಮ್ಮ ಮಾನವ ಬಂಧುತ್ವ ವೇದಿಕೆ ಜತೆಗೂಡಿ ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಇನ್ನಷ್ಟು ಸಮಾಜಮುಖೀ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು. ಅನಾಥ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡಬೇಕು.ಸತೀಶ ಜಾರಕಿಹೊಳಿ,
ಕೆಪಿಸಿಸಿ ಕಾರ್ಯಾಧ್ಯಕ್ಷ