Advertisement

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಲಿ

09:15 PM Jan 21, 2022 | Team Udayavani |

ಹರಪನಹಳ್ಳಿ: ಕೇಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಾಲ್ಮೀಕಿ ಸಮುದಾಯಕ್ಕೆ ತಕ್ಷಣ ಶೇ.7.5 ಮೀಸಲಾತಿ ಘೋಷಣೆ ಮಾಡಬೇಕು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು. ತಾಲೂಕಿನ ಅರಸೀಕೆರೆಯಲ್ಲಿ ಗುರುವಾರ ಹರಿಹರದ ರಾಜನಹಳ್ಳಿ ಗುರುಪೀಠದಲ್ಲಿ ಫೆ.8 ಮತ್ತು 9ರಂದು ಜರುಗುವ ವಾಲ್ಮೀಕಿ ಜಾತ್ರೆಯ ಅಂಗವಾಗಿ ವಾಲ್ಮೀಕಿ ಜಾತ್ರೆಯ ಪೋಸ್ಟರ್‌ ಕಾರ್ಡ್‌ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

Advertisement

ರಾಜ್ಯದಲ್ಲಿ ಸುಮಾರು 45 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ವಾಲ್ಮೀಕಿ ನಾಯಕ ಸಮಾಜ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಕಳೆದ 3 ದಶಕಗಳಿಂದ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಸೇರಿದಂತೆ ವಿವಿಧ ರೀತಿಯ ಹೋರಾಟ ಮಾಡುತ್ತಾ ಬಂದರೂ ಸರ್ಕಾರ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಈಗಾಗಲೇ ಸರ್ಕಾರ ಮೂರು ಬಾರಿ ಸಮಿತಿ ರಚಿಸಿದೆ ಆದರೂ ಸಹ ಮೀಸಲಾತಿ ಘೋಷಿಸಲು ಮೀನಾಮೇಷ ಮಾಡುತ್ತಿದೆ.

ರಾಜ್ಯದಲ್ಲಿ ಹಿಂದುಳಿದ ಪ್ರತಿಯೊಂದು ಜನಾಂಗಕ್ಕೂ ಮೀಸಲಾತಿ ಬೇಕು. ಸರ್ಕಾರ ಸರಿಯಾದ ರೀತಿಯಲ್ಲಿ ಮೀಸಲಾತಿ ಕಲ್ಪಿಸಿಕೊಡಬೇಕು. ಜತೆಗೆ ಲಿಂಗಾಯಿತರಿಗೂ 2ಎ ಮೀಸಲಾತಿ ನೀಡಲಿ ಎಂದು ಹೇಳಿದರು. ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೆ.ಉತ್ಛಂಗಪ್ಪ, ಜಾತ್ರಾ ಸಮಿತಿ ಅಧ್ಯಕ್ಷ ಆಲದಹಳ್ಳಿ ಷಣ್ಮುಖಪ್ಪ ನಿವೃತ್ತ ಕೆಇಬಿ ಎಂಜಿನಿಯರ್‌ ಭೀಮಪ್ಪ, ಮಹಿಳಾ ಘಟಕದ ಗೌರವ ಅಧ್ಯಕ್ಷೆ ಪದ್ಮಾವತಿ, ಮಡಿವಾಳ ಸಮಾಜದ ಜಿಲ್ಲಾ ಅಧ್ಯಕ್ಷ ಯರಬಳ್ಳಿ ಉಮಾಪತಿ, ಮುಖಂಡರಾದ ವೈ.ಡಿ. ಅಣ್ಣಪ್ಪ, ಪಣಿಯಾಪುರ ಲಿಂಗರಾಜ್‌, ಪರುಶುರಾಮ್‌, ನವೀನ್‌, ರಂಗಪ್ಪ, ಕಬ್ಬಳ್ಳಿ ಪಾಂಡು, ತುಕ್ಕೇಶ್‌, ರಾಮಚಂದ್ರಪ್ಪ ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next