Advertisement
ತಾಲೂಕಿನ ಕಡೋಲಿ ಗ್ರಾಮದಲ್ಲಿ ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಬಹುಜನ ಸಮಾಜ ವತಿಯಿಂದ ಶುಕ್ರವಾರ ನಡೆದ ಸ್ವರಾಜ್ಯ ಸಂಕಲ್ಪ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಛತ್ರಪತಿ ಶಿವಾಜಿ ಮಹಾರಾಜರನ್ನು 350 ವರ್ಷಗಳ ನಂತರವೂ ನಾವು ನೆನಪಿಸಿಕೊಳ್ಳುತ್ತೇವೆ. ಇನ್ನೂ ಅವರು ಜೀವಂತವಾಗಿ ಉಳಿದುಕೊಂಡಿದ್ದಾರೆ. ಜಗತ್ತಿನ ಯಾವ ಪ್ರದೇಶದಲ್ಲಿಯೂ ಶಿವಾಜಿ ಮಹಾರಾಜರಂತೆ ಪರಾಕ್ರಮಿ, ಧೈರ್ಯಶಾಲಿ ರಾಜನಿಲ್ಲ. ರಾಜನಾಗಿ ಜನಿಸಿರಲಿಲ್ಲ, ಅವರು ಯಾರ ಬೆನ್ನಿಗೂ ಚೂರಿ ಹಾಕಿ ಸಾಮ್ರಾಜ್ಯ ಕಟ್ಟಲಿಲ್ಲ.
ರಾಜನಾಗಿ ಮೆರೆದು ಹಿಂದವಿ ಸ್ವರಾಜ್ಯದ ಸಂಕಲ್ಪ ಮಾಡಿದ ಮಹಾರಾಜ ನಮ್ಮ ಛತ್ರಪತಿ ಶಿವಾಜಿ ಮಹಾರಾಜರು. ದೇವರು ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ಶಿವಾಜಿ ಮಹಾರಾಜರಲ್ಲಿಯ ಮಾನವೀಯತೆಯ ಕಾರ್ಯದಿಂದ ಅವರು ನಮ್ಮಲ್ಲಿ ದೇವರಾಗಿ ಉಳಿದುಕೊಂಡಿದ್ದಾರೆ. ಜಾತಿ, ಧರ್ಮ, ಭಾಷೆಗಿಂತ ಅವರ ಕಾರ್ಯದಿಂದ ಅಜರಾಮರವಾಗಿದ್ದಾರೆ ಎಂದು ಹೇಳಿದರು.
ಮನುಷ್ಯನಿಗಾಗಿ ಧರ್ಮ ಇಲ್ಲ. ಧರ್ಮಕ್ಕಾಗಿ ಮನುಷ್ಯ ಇದ್ದಾನೆ. ಮಾನವೀಯತೆಯ ಆಧಾರದ ಮೇಲೆ ಬದುಕಬೇಕು. ರಾಷ್ಟ್ರ ಜೀವಂತವಾಗಿದ್ದರೆ ನಾವೆಲ್ಲರೂ ಇರಲು ಸಾಧ್ಯ. ಮಣ್ಣು, ಮಾತೆಯನ್ನು ಪ್ರೀತಿಸಬೇಕು. ಪ್ರಚೋದನೆ ಮಾಡುವುದಕ್ಕಿಂತ ಬಾಂಧವ್ಯ, ಸೌಹಾರ್ದತೆ ಬೆಳೆಸಬೇಕು ಎಂದರು.
ಕಸಬಾ ನೂಲ ರಾಮನಾಥ ಗಿರಿ ಸಮಾಧಿ ಮಠದ ಶ್ರೀ ಭಗವಾನ್ ಗಿರಿ ಮಹಾರಾಜ ಮಾತನಾಡಿ, ತಾಯಿ ಜೀಜಾಮಾತೆಯ ಆಶೀರ್ವಾದದಿಂದ ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯ ಸ್ಥಾಪಿಸಿದರು. ಶಿವಾಜಿ ಮಹಾರಾಜರ ಧೈರ್ಯ, ಸ್ಥೈರ್ಯ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ದುರದುಂಡೀಶ್ವರ ವಿರಕ್ತಮಠದ ಶ್ರೀ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಭಾರತದಲ್ಲಿ ನಾವೆಲ್ಲ ಜನಿಸಿದ್ದೇ ಸುದೈವ. ಅನೇಕ ಧರ್ಮ, ಜಾತಿಗಳಿದ್ದರೂ ಅನ್ಯೋನ್ಯತೆಯಿಂದ ಬದುಕುತ್ತಿರುವುದು ಹೆಮ್ಮೆ. ಭಾರತೀಯರಾದ ನಾವು ಧರ್ಮ ಸಹಿಷ್ಣುಗಳು. ಬದುಕಿನಲ್ಲಿ ನಾವೇನೂ ಗಳಿಸಿದರೂ ನಮ್ಮೊಂದಿಗೆ ಇರುವುದು ಧರ್ಮ ಮಾತ್ರ ಎಂದ ಅವರು, ಒಳ್ಳೆಯ ಕೆಲಸ ಮಾಡುವವರನ್ನು ನಾವು ಪ್ರೋತ್ಸಾಹಿಸಬೇಕು. ನಮಗೆ ಸಹಾಯ- ಸಹಕಾರ ಮಾಡಿದವರನ್ನು ನಾವು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದರು. ಯುವ ಮುಖಂಡ ರಾಹುಲ್ ಜಾರಕಿಹೊಳಿ ಇದ್ದರು.