Advertisement

ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ

11:43 AM Nov 30, 2017 | Team Udayavani |

ಕೆ.ಆರ್‌.ಪುರ: ಸ್ತ್ರೀಶಕ್ತಿ ಸಂಘ ಮತ್ತು ಮಹಿಳಾ ಸಹಕಾರ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಿರುವ ಷೇರುದಾರರು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವ ಜತೆಗೆ ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್‌ ಹೇಳಿದರು.

Advertisement

ರಾಮಮೂರ್ತಿ ನಗರದಲ್ಲಿ ಅಮೃತವರ್ಷಿಣಿ ಮಹಿಳಾ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳು ಮತ್ತು ಸಹಕಾರ ಬ್ಯಾಂಕ್‌ಗಳಿಂದ ಧನ ಸಹಾಯ ಪಡೆದು ಲಾಭದಾಯಕ ಕಾರ್ಯಗಳಿಗೆ ಬಳಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಎ.ಬಸವರಾಜ ಮಾತನಾಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರತ್ನಪ್ರಭಾ, ರಾಜ್ಯ ಪೋಲಿಸ್‌ ಮಹಾನಿರ್ದೇಶಕರಾಗಿ ನೀಲಮಣಿ ರಾಜು ಅವರನ್ನು ನೇಮಿಸಿರುವ ಸರ್ಕಾರ ಆಯಕಟ್ಟಿನ ಹುದ್ದೆಗಳನ್ನು ಮಹಿಳೆಯರಿಗೆ ನೀಡುವ ಮೂಲಕ ಸ್ತ್ರೀ ಸಬಲತೆಗೆ ಆದ್ಯತೆ ನೀಡಿದೆ ಎಂದರು. ಮಹಿಳಾ ಮತ್ತು ಮಕ್ಕಳ ಭಿವೃದ್ಧಿ ನಿಗಮದ ನಗರ ಜಿಲ್ಲಾಧ್ಯಕ್ಷೆ ಜಯಂತಿ ¸‌ಗವಾನ್‌, ಸೊಸೈಟಿ ಅಧ್ಯಕ್ಷೆ ಸಾಕಮ್ಮ, ಉಪಧ್ಯಕ್ಷೆ ಶಾಂತಾ ಕೃಷ್ಣಮೂರ್ತಿ, ನಿರ್ದೇಶಕ ಮಧುಗೌಡ ಮತ್ತಿತ್ತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next