Advertisement
ಗೀತಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ 7 ದಿನ ನಡೆಯುವ ಶ್ರೀಕೃಷ್ಣ ಸಪ್ತೋತ್ಸವ ಹಾಗೂ ಸಂಜೀವಿನಿ ಸಂಘಗಳ ಸದಸ್ಯರಿಂದ ತಯಾರಿಸಲ್ಪಟ್ಟ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ಕಟಪಾಡಿ ಕಾಳಿಕಾಂಬಾ ದೇವ ಸ್ಥಾನದ ಧರ್ಮದರ್ಶಿ ಮುರಹರಿ ಆಚಾರ್ಯ ಅವರಿಗೆ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.
ಮಾಜಿ ಶಾಸಕ ಕೆ. ರಘಪತಿ ಭಟ್, ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ, ಉದ್ಯಮಿಗಳಾದ ಹರಿಪ್ರಸಾದ್ ರೈ, ಭುವನೇಂದ್ರ ಕಿದಿಯೂರು, ಸುರೇಂದ್ರ ಕಲ್ಯಾಣಪುರ, ಪ್ರದೀಪ್ ಕಲ್ಕೂರ, ಪ್ರೇಮ್ ಮಿನೇಜಸ್ ಉಪಸ್ಥಿತರಿದ್ದರು. ಪುತ್ತಿಗೆ ಮಠದ ರಮೇಶ್ ಭಟ್ ನಿರೂಪಿಸಿದರು.
ಕರಕುಶಲ ವಸ್ತುಗಳ ಪ್ರದರ್ಶನಶ್ರೀಕೃಷ್ಣ ಮಠದ ಗೀತಾಮಂದಿರದಲ್ಲಿ ಆ.30ರವರೆಗೆ ಸಂಜೀವಿನಿ ಕರಕುಶಲ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದ್ದು, ವಿವಿಧ ಬಗೆಯ ಊದುಬತ್ತಿ, ಸೋಪುಗಳು, ಕಲಶ ಕನ್ನಡಿ, ಗೃಹಪ್ರವೇಶ ಪರಿಕರ, ಹಳದಿ ಕಾರ್ಯಕ್ರಮ ಸಾಮಗ್ರಿ, ದೇವರ ಹರಿವಾಣ, ತೋರಣಗಳು, ವಿವಿಧ ಚಿತ್ತಾರಗಳ ಪೈಟಿಂಗ್, ಸೀರೆ, ಕುಂಬಾರಿಕೆ ವಸ್ತುಗಳು ಗಮನಸೆಳೆಯುತ್ತಿವೆ. ಉಡುಪಿ, ಕಾಪು, ಶಿರ್ವ, ಚೇರ್ಕಾಡಿ, ಉದ್ಯಾವರ, ಉತ್ತರಕನ್ನಡ ಸಹಿತ ವಿವಿಧ ಭಾಗದಿಂದ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ.