Advertisement

ಸರ್ಕಾರದ ಹಣ ಸಮರ್ಪಕ ಬಳಕೆಯಾಗಲಿ

10:03 AM Jun 26, 2021 | Team Udayavani |

ಬೆಳಗಾವಿ: ಸರ್ಕಾರದ ಹಣವನ್ನು ಸಮರ್ಪಕವಾಗಿ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬೇಕು. ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ಸಾರ್ವಜನಿಕರಿಂದ ಕಾಮಗಾರಿ ಗುಣಮಟ್ಟದ ಕುರಿತು ದೂರುಗಳು ಬಾರದಂತೆ ನಿಗಾವಹಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ತಾಪಂ ಕಾರ್ಯಾಲಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಸಂಬಂಧಪಟ್ಟ ಅಭಿವೃದ್ಧಿ ಕೆಲಸಗಳು ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.

ಜಲ ಜೀವನ ಮಿಷನ್‌, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, 14 ನೇ ಮತ್ತು 15 ನೇ ಹಣಕಾಸು ಯೋಜನೆ, ವಿವಿಧ ವಸತಿ ಯೋಜನೆಗಳು, ಸ್ವಚ್ಛ ಭಾರತ್‌ ಮಿಷನ್‌- ಗ್ರಾಮೀಣ, ಗ್ರಾಮ ಪಂಚಾಯತ್‌ ಮನೆ ಕರ ಮತ್ತು ನೀರಿನ ಕರ ವಸೂಲಿ, ಗ್ರಾಮ ಪಂಚಾಯತಿಯಲ್ಲಿ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳುಹಾಗೂ ಕೋವಿಡ್‌-19 ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ತಹಶಿಲ್ದಾರ್‌ ಆರ್‌.ಕೆ. ಕುಲಕರ್ಣಿ, ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಉಪಸ್ಥಿತರಿದ್ದರು.

ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ: ಲಕ್ಷ್ಮೀ :

ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ಯಾರೇ ಮುಖ್ಯಮಂತ್ರಿಯಾದರೂ ಅದನ್ನು ಹೃದಯಪೂರ್ವಕ ಸ್ವೀಕಾರ ಮಾಡುತ್ತೇವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾರ್ಮಿಕವಾಗಿ ಹೇಳಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ ಮೊದಲಿಂದಲೂ ಶಿಸ್ತಿನ ಪಕ್ಷ. ನಮಗೆ ಒಂದು ಹೈಕಮಾಂಡ್‌ ಇದೆ. ಅದು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಮುಖ್ಯವಾಗಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಮುಖ್ಯ ಗುರಿ ಎಂದರು. ಮಧ್ಯಂತರ ಚುನಾವಣೆ ಹಾಗೂ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ನಾನು ಭವಿಷ್ಯ ಹೇಳುವುದಿಲ್ಲ. ಇನ್ನು ಪಕ್ಷದಿಂದ ಹೊರಗೆ ಹೋದವರು ಮರಳಿ ಬರುವ ವಿಷಯಕ್ಕೆ ಸಂಬಂಧಪಟ್ಟಂತೆ ನಮ್ಮ ಪಕ್ಷದ ಹಿರಿಯರು ನಿರ್ಧಾರ ಮಾಡುತ್ತಾರೆ. ನಾನು ಕಾಂಗ್ರೆಸ್‌ ಅಧ್ಯಕ್ಷೆಯೂ ಅಲ್ಲ, ಪಕ್ಷದಲ್ಲಿ ಹಿರಿಯಳೂ ಅಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next