Advertisement

ವೋಟರ್‌ ಸ್ಲಿಪ್‌ ಮತದಾರನಿಗೆ ತಲುಪಲಿ: ಡಿಸಿ

02:39 PM Oct 21, 2021 | Shwetha M |

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭಾ ಉಪ ಚುನಾವಣೆಗಾಗಿ ಮತಕ್ಷೇತ್ರದ ವೋಟರ್‌ ಸ್ಲಿಪ್‌ಗಳು ಮತದಾರನಿಗೆ, ಆತನ ಕುಟುಂಬದವರಿಗೆ ಮಾತ್ರ ಒದಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸೂಚನೆ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಸಿಂದಗಿ ಉಪ ಚುನಾವಣೆಗೆ ಸಂಬಂಧಪಟ್ಟಂತೆ ಕೈಗೊಂಡ ವಿವಿಧ ಪೂರ್ವ ಸಿದ್ಧತೆಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದ ಅವರು, ಸಿಂದಗಿ ಕ್ಷೇತ್ರದ ಮತದಾರ ವೋಟರ್‌ ಸ್ಲಿಪ್‌ಗಳು ವಿತರಣೆಯಲ್ಲಿ ಯಾವುದೇ ಮಧ್ಯವರ್ತಿ, ರಾಜಕೀಯ ವ್ಯಕ್ತಿಗಳ ಹಸ್ತಕ್ಷೇಪ ಇಲ್ಲದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸರಿಯಾದ ವರದಿ ಸಲ್ಲಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಚುನಾವಣೆಯಲ್ಲಿ ಮತಕ್ಷೇತ್ರದ ವಿಕಲಚೇತನರಿಂದ ಶೇಕಡಾ ನೂರರಷ್ಟು ಮತದಾನ ಆಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ವಾಹನ ವ್ಯವಸ್ಥೆಯಂತಹ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸೆಕ್ಟರ್‌ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಿದ ಅವರು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಈ ಬಗ್ಗೆ ವರದಿ ಸಲ್ಲಿಸುವಂತೆ ಅವರು ಸಿಂದಗಿ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಮತದಾನ ದಿನದಂದು ಮತಗಟ್ಟೆಗಳಿಗೆ ನೇಮಿಸಿದ ಚುನಾವಣಾ ಸಿಬ್ಬಂದಿಗಳಿಗೆ ಆಹಾರದ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಇವಿಎಂ ಯಂತ್ರಗಳಲ್ಲಿ ದೋಷಗಳು ಕಂಡು ಬಂದರೆ ಕೂಡಲೇ ಅದನ್ನು ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಚುನಾವಣೆಗೆ ನೇಮಿಸಿದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಲೋಪ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪಿಆರ್‌ಒ ಮತ್ತು ಎಪಿಆರ್‌ಒಗಳು ಇನ್ನಷ್ಟು ಚುರುಕಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಬೇಕು. ಇದಕ್ಕಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

Advertisement

ಸಭೆಯಲ್ಲಿ ಸಿಂದಗಿ ಚುನಾವಣಾಧಿಕಾರಿ ರಾಹುಲ್‌ ಸಿಂಧೆ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next