Advertisement

BJP Corruption; ದಾಖಲೆ ಇದ್ದರೆ ಯತ್ನಾಳ್ ತನಿಖೆ ಮಾಡಿಸಲಿ: ವಿಜಯೇಂದ್ರ ಸವಾಲು

06:45 PM Dec 30, 2023 | Team Udayavani |

ವಿಜಯಪುರ : ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕೋವಿಡ್ ಸಂದರ್ಭ 40 ಸಾವಿರ ಕೋಟಿ ರೂ. ಹಗರಣ ಮಾಡಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಬಸನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಸಾಕ್ಷಿಗಳಿದ್ದರೆ ಸರಕಾರಕ್ಕೆ ನೀಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

Advertisement

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, ಯತ್ನಾಳ್ ಮಾಡಿರುವ ಆರೋಪದಲ್ಲಿ ಗಂಭೀರತೆ ಇಲ್ಲ, ಹೀಗಾಗಿ ಇಂಥವಕ್ಕೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ. ಅಷ್ಟಕ್ಕೂ ಪ್ರಾಮಾಣಿಕ ಆಡಳಿತ ನಡೆಸಿರುವ ಯಡಿಯೂರಪ್ಪ ಅವರಿಗೆ ಯಾರ ಅನುಕಂಪದ ಅಗತ್ಯವೂ ಇಲ್ಲ ಎಂದರು.

ಪಕ್ಷದ ನಾಯಕರ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದರೂ ಸ್ವಪಕ್ಷೀಯ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೇಂದ್ರ ವರಿಷ್ಠರಿಗೆ ಯಾರೂ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಾನು ಯಡಿಯೂರಪ್ಪ ಅವರ ಮಗ ಎಂಬ ಕಾರಣಕ್ಕೆ ಅವರ ಕೃಪೆಯಿಂದ ಬಿಜೆಪಿ ವರಿಷ್ಠರು ನನ್ನನ್ನು ಪಕ್ಷದ ಅಧ್ಯಕ್ಷ ಸ್ಥಾನದ ಹೊಣೆ ನೀಡಿಲ್ಲ. ಪಕ್ಷ ಕಟ್ಟುವಲ್ಲಿ ಶ್ರಮಿಸಿದ ನನ್ನ ಸೇವೆಯನ್ನು ಪರಿಗಣಿಸಿ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ ಎಂದರು.

ಹಳೆಯ ವರ್ಷಕ್ಕೆ ವಿದಾಯ ಹೇಳುತ್ತಿದ್ದು, ಹೊಸ ವರ್ಷದ ಆಗಮನ ಸಂದರ್ಭದಲ್ಲಿ ಎಲ್ಲ ಹಳೆ ವಿಚಾರಗಳನ್ನು ಬದಿಗಿಟ್ಟು, ಎಲ್ಲರ ವಿಶ್ವಾಸಕ್ಕೆ ಪಡೆದು, ಪಕ್ಷವನ್ನು ಸಂಘಟಿಸುವ ಕೆಲಸದಲ್ಲಿ ತೊಡಗುತ್ತೇನೆ ಎನ್ನುವ ಮೂಲಕ ಯತ್ನಾಳ್ ಮಧ್ಯೆ ಇರುವ ಬಿರುಕು ಮುಚ್ಚುವ ಭರವಸೆ ನೀಡಿದರು.

ಯತ್ನಾಳ್ ಗೈರು
ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ವಿಜಯೇಂದ್ರ ಅವರನ್ನು ಸ್ವಾಗತಿಸಲು ಹಮ್ಮಿಕೊಂಡಿದ್ದ ಅದ್ದೂರಿ ಮೆರವಣಿಗೆ, ಸನ್ಮಾನ ಸಮಾರಂಭ ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗೂ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೈರಾಗಿದ್ದರು.

Advertisement

ವಿಜಯೇಂದ್ರ ಅವರ ಸನ್ಮಾನ ಸಮಾರಂಭ ಹಾಗೂ ಮೆರವಣಿಗೆ ಹೀಗೆ ಎಲ್ಲ ಕಡೆಗಳಲ್ಲೂ ಯತ್ನಾಳ ಮಾತ್ರವಲ್ಲ ಅವರ ಬೆಂಬಲಿ ನಾಯಕರು, ಕಾರ್ಯಕತರೂ ಸಭೆಗೆ ಗೈರಾಗಿದ್ದರು.

ಯತ್ನಾಳ್ ತಮ್ಮ ಕಾರ್ಯಕ್ರಮಕ್ಕೆ ಗೈರಾಗಿದ್ದರೂ ಸಮಾರಂಭದ ವೇದಿಕೆಯಲ್ಲಿ ಯತ್ನಾಳ ಅವರ ಹೆಸರು ಪ್ರಸ್ತಾಪಿಸಿದ ವಿಜಯೇಂದ್ರ, ಎಲ್ಲವನ್ನೂ ಮರೆತು ಪಕ್ಷ ಕಟ್ಟಲು ಹಾಗೂ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಕ್ಕಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next