Advertisement
ರಟ್ಟೀಹಳ್ಳಿಯ ಲಯನ್ಸ್ ಶಾಲಾ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಜನತೆ ಮಾದಕ ವ್ಯಸನಕ್ಕೆ ಬಲಿಯಾಗಿ ಅಪರಾಧ ಕೃತ್ಯಕ್ಕಿಳಿಯುತ್ತಿದ್ದಾರೆ. ಪರಿಣಾಮ ಮಾನಸಿಕ ಖನ್ನತೆ, ನಿದ್ರಾ ಹೀನತೆಗಳಂಥ ಸಮಸ್ಯೆ ಎದುರಿಸುತ್ತಿದ್ದಾರೆ. ಅಲ್ಲದೆ ಅನೇಕ ಕಾಯಿಲೆಗಳಿಗೆ ತುತ್ತಾಗಿ ಅಮೂಲ್ಯ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಶಾಲಾ ಕಾಲೇಜು ಮಟ್ಟದಲ್ಲಿ ಈ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಜೀವನದಲ್ಲಿ ಒಳ್ಳೆಯ ಹಾಗೂ ಕೆಟ್ಟ ಎಂಬ ಆಯ್ಕೆಗಳಿದ್ದು, ಅದರಲ್ಲಿ ಒಳ್ಳೆಯದನ್ನು ಆಯ್ಕೆ ಮಾಡಿಕೊಂಡು ನಿಮ್ಮ ತಂದೆ ತಾಯಿಯ ಕನಸು ನನಸು ಮಾಡಿ ಎಂದರು.
Advertisement
ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಲಿ
03:19 PM Jun 29, 2019 | Suhan S |
Advertisement
Udayavani is now on Telegram. Click here to join our channel and stay updated with the latest news.