Advertisement

ಕೃಷಿಕರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಿ

10:15 AM May 12, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಕೊರೊನಾ ಲಾಕ್‌ಡೌನ್‌ ಪರಿಣಾಮ ಎಲ್ಲ ಕ್ಷೇತ್ರಗಳಿಗಿಂತ ಕೃಷಿ ವಲಯಕ್ಕೆ ಹೆಚ್ಚಿನ ಹೊಡೆದ ಬಿದ್ದಿದ್ದು, ರೈತಾಪಿ ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕೂಡಲೇ ಸರ್ಕಾರ ಕೃಷಿ ವಲಯಕ್ಕೆ ವಿಶೇಷ  ಪ್ಯಾಕೇಜ್‌ ಘೋಷಿಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯ ಕರ್ತರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

Advertisement

ನಗರದ ತಾಲೂಕು ಕಚೇರಿ ಮುಂದೆ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಒದಗಿಸಿ  ಬೆಲೆ ನಿಗದಿಗೊಳಿಸಬೇಕು, ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ರೈತರಿಗೆ ಕೃಷಿ ಸಾಲ ವಿಸ್ತರಿಸಿ ಸಾಲದ ಬಡ್ಡಿ ಮನ್ನಾಗೊಳಿಸ ಬೇಕು, ಪಡಿತರ ವಿತರಣೆ ಹೆಚ್ಚಿಸಿ ತಲಾ ಒಬ್ಬ  ವ್ಯಕ್ತಿಗೆ ತಿಂಗಳಿಗೆ 15 ಕೆ.ಜಿ. ಅಕ್ಕಿ ನೀಡಬೇಕೆಂದು ಪ್ರಾಂತ ರೈತ ಸಂಘದ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪಮಾತನಾಡಿ, ಕೊರೊನಾ ಸಂಕಷ್ಟದಿಂದ ಎರಡು ತಿಂಗ  ಳಿಂದ  ಲಾಕ್‌ಡೌನ್‌ ಘೋಷಿಸಿರುವ ಸರ್ಕಾರ ರೈತರಿಗೆ, ಕೃಷಿಕರ ಸಮಸ್ಯೆ ಈಡೇರಿಸಲು ಗಂಭೀರ ಪ್ರಯತ್ನ ನಡೆಸಿಲ್ಲ. ಮುಂಗಾರು ಹಂಗಾಮು ಶುರುವಾಗಿರುವುದ ರಿಂದ ರೈತರಿಗೆ ಅಗತ್ಯ ರಸಗೊಬ್ಬರ, ಬಿತ್ತನೆ ಬೀಜ ವಿತರಿಸಲು ಕ್ರಮ ವಹಿಸಬೇಕು.

ಎಲ್ಲಾ ಕೃಷಿ ಪರಿಕರಗಳ ಮೇಲೆ ವಿಶೇಷ ರಿಯಾಯಿತಿ ಘೋಷಿಸಬೇಕು. ಪಶು ಆಹಾರ ಬೆಲೆ ಕಡಿತಗೊಳಿಸಬೇಕು, ರೈತಾಪಿ ಕೃಷಿ ಕೂಲಿ ಕಾರಕ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.  ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುದರ್ಶನ್‌, ಬಸವರಾಜ್‌, ನಾಗೇಶ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next