Advertisement

ರಮೇಶ್‌ ಜಾರಕಿಹೊಳಿ ಹಿತ ಶತ್ರುಗಳ ಬಗ್ಗೆ ಎಚ್ಚರದಿಂದಿರಲಿ

12:50 AM Jan 04, 2019 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಬೇರೆಯವರ ಮಾತು ಕೇಳಿ ತಪ್ಪು ನಿರ್ಧಾರ ತೆಗೆದುಕೊಳ್ಳುವ ಬದಲು ಪಕ್ಷದ ಹೈ ಕಮಾಂಡ್‌ ಜೊತೆ ಮಾತುಕತೆ ನಡೆಸಿ ತಮ್ಮ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕಿವಿ ಮಾತು ಹೇಳಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ನ ಕಟ್ಟಾಳಾಗಿದ್ದು, ಅವರ ರಾಜಕಾರಣವನ್ನು ಮುಗಿಸುವ ಷಡ್ಯಂತ್ರವನ್ನು ಕೆಲವರು ಮಾಡುತ್ತಿದ್ದಾರೆ.  ಹಿತಶತ್ರುಗಳು ಅವರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರು ಬೇರೆಯವರ ಮಾತು ಕೇಳದೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳುತ್ತೇವೆ. ಕಾಂಗ್ರೆಸ್‌ ಯಾವುದೇ ವಿಷಯದಲ್ಲಿ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿಲ್ಲ. ನಾವು ಮೈತ್ರಿ ಧರ್ಮ ಪಾಲನೆ ಮಾಡುವ ನಿರ್ಧಾರ ಮಾಡಿದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವುದು ನಮ್ಮ ಗುರಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next