Advertisement

ಮಕ್ಕಳಲ್ಲಿ ದೇಶಾಭಿಮಾನ ಮೂಡಿಸುವ ಕಾರ್ಯ ಮಾಡೋಣ: ಸುಕುಮಾರ್‌ ಶೆಟ್ಟಿ

04:36 PM Feb 09, 2021 | Team Udayavani |

ಮುಂಬಯಿ: ನಮ್ಮ ಪೂರ್ವಜರ ತ್ಯಾಗ, ಬಲಿದಾನ ಹಾಗೂ ನಿರಂತರ ಹೋರಾಟದಿಂದಾಗಿ ನಮ್ಮ ದೇಶ ಬ್ರಿಟಿಷರ ದಾಸ್ಯದಿಂದ ಬಿಡುಗಡೆ ಹೊಂದಿದೆ. ಇಂದು ನಮ್ಮ ದೇಶ ವಿವಿಧ ಸಾಧನೆಗಳಲ್ಲಿ ವಿಶ್ವದ ಗಮನ ಸೆಳೆದಿದೆ. ನಮ್ಮ ಪವಿತ್ರ ಭರತ ಭೂಮಿಯ ಕುರಿತು ಮಕ್ಕಳಲ್ಲಿ ದೇಶಾಭಿಮಾನದ ಸೆಲೆ ಬತ್ತದಂತೆ ಅವರಲ್ಲಿ ನಿರಂತರವಾಗಿ ದೇಶಾಭಿಮಾನ ಬೆಳೆಸುವ ಕಾರ್ಯ ಮಾಡೋಣ ಎಂದು ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಸುಕುಮಾರ ಎನ್‌. ಶೆಟ್ಟಿ ಹೇಳಿದರು.

Advertisement

ಅವರು ಜ. 26ರಂದು ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜುನಾಥ ವಿದ್ಯಾಲಯದಲ್ಲಿ ನಡೆದ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಯಾರೂ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ನಾವು ಭಾರತೀಯರು ಎಂಬ ಹೆಮ್ಮೆ ನಮ್ಮಲ್ಲಿರಬೇಕು. ಇಂದಿನ ಮಕ್ಕಳೇ ನಾಳಿನ ನಾಗರಿಕರು. ಆದ್ದರಿಂದ ಅವರಿಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ನಮ್ಮ-ನಿಮ್ಮೆಲ್ಲರ¨ªಾಗಿದೆ ಎಂದು ಹೇಳಿ ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಡೊಂಬಿವಲಿ ಕರ್ನಾಟಕ ಸಂಘದ ಉಪಾಧ್ಯಕ್ಷ ಡಾ| ದಿಲೀಪ್‌ ಕೊಪರ್ಡೆ, ಉಪಕಾರ್ಯಾಧ್ಯಕ್ಷ ಡಾ| ವಿಜಯ ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ ಕುಲಾಲ್‌, ಕೋಶಾಧಿಕಾರಿ ಲೋಕನಾಥ ಶೆಟ್ಟಿ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ರಾಜೀವ ಭಂಡಾರಿ, ನ್ಯಾಯವಾದಿ ಆರ್‌. ಎಂ. ಭಂಡಾರಿ, ಜಗನ್ನಾಥ ಶೆಟ್ಟಿ, ಪ್ರೊ| ಅಜಿತ್‌ ಉಮರಾಣಿ, ಮಂಜುನಾಥ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ವಿ. ಎಸ್‌. ಅಡಿಗಲ್‌, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೊರೊನಾ ಮಾರ್ಗ ಸೂಚಿಗಳಿಗೆ ಅನುಗುಣವಾಗಿ ಸರಳ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next