Advertisement

ಪ್ರವೇಶ ಪತ್ರ ಡೌನ್‌ಲೋಡ್‌ಗೆ ಅವಕಾಶ

11:24 PM May 14, 2019 | Team Udayavani |

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರ ನೇಮಕಾತಿಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

Advertisement

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ (ಪರೀಕ್ಷೆ-2) ಮೇ 25, 26ರಂದು ರಾಜ್ಯದ 34 ಶೈಕ್ಷಣಿಕ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ.

ಪರೀಕ್ಷೆಗೆ ಹಾಜರಾಗುವ ಅರ್ಹ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರ www.schooleducation.nic.in ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಂಡ ಪ್ರವೇಶ ಪತ್ರಗಳಲ್ಲಿ ಯಾವುದೇ ವ್ಯತ್ಯಾಸವಿದ್ದಲ್ಲಿ ಕೂಡಲೇ ಕೇಂದ್ರೀಕೃತ ದಾಖಲಾತಿ ಘಟಕದ ಸಹಾಯವಾಣಿ ಸಂಖ್ಯೆ 080-22483140, 22483145 ಮತ್ತು 22228805ಗೆ ಅಥವಾ ಇ-ಮೇಲ್‌ www.schooleducation.nic.in ಗೆ ಕಳುಹಿಸಿ ಮನವಿ ಸಲ್ಲಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next