Advertisement

ಪೂರ್ಣಗೊಳ್ಳಲಿ ಪಂಪ್‌ವೆಲ್‌ ಮೇಲ್ಸೇತುವೆ

10:52 PM Aug 10, 2019 | Team Udayavani |

ಸಾಕಷ್ಟು ಟೀಕೆ ಹಾಗೂ ಅಪಹಾಸ್ಯಕ್ಕೆ ಗುರಿಯಾಗಿರುವ ಪಂಪ್‌ವೆಲ್‌ ಮೇಲ್ಸೇತುವೆ ಪೂರ್ಣಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಗಡುವು ಮೀರಿದರೂ, ಪಂಪ್‌ವೆಲ್‌ ಮೇಲ್ಸೇತುವೆ ಮಾತ್ರ ಸಾರ್ವಜನಿಕರಿಗೆ ಮುಕ್ತವಾಗಿಲ್ಲ. ಇತ್ತೀಚೆಗೆಯಷ್ಟೇ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ಇದಾದಾಬಳಿಕ ಪಂಪ್‌ವೆಲ್‌ ಫ್ಲೆ çಓವರ್‌ ಕಾಮಗಾರಿ ವೇಗ ಪಡೆಯಬಹುದು ಎಂದು ಆಂದಾಜಿಸಲಾಗಿತ್ತು. ಇನ್ನೂ ಕುಂಟುತ್ತಾ ಸಾಗುತ್ತಿದೆ.

Advertisement

ಪಂಪ್‌ವೆಲ್‌ ಮೇಲ್ಸೇತುವೆ ಒಟ್ಟು 600 ಮೀಟರ್‌ ಉದ್ದ ಹಾಗೂ 20 ಮೀಟರ್‌ ಅಗಲ ಹೊಂದಿರಲಿದ್ದು, ಕಾಮಗಾರಿಗೆ 2010ರಲ್ಲಿಯೇ ಚಾಲನೆ ನೀಡಲಾಗಿತ್ತು. ಮೊದಲ ಆರು ವರ್ಷಗಳಲ್ಲಿ ಕುಂಟುತ್ತಾ ಸಾಗಿದ ಕಾಮಗಾರಿಯು ಕಳೆದ ಮೂರು ವರ್ಷಗಳ ಹಿಂದೆ ವೇಗ ದೊರೆಯಿತು. ಕಾಮಗಾರಿ ಮತ್ತೆ ಆಮೆಗತಿಗೆ ತಿರುಗಿತು. 2019ರ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿಸಬೇಕು ಎಂದು ಸಂಸದರು ನವಯುಗ್‌ ಸಂಸ್ಥೆಯ ಮೇಲೆ ಒತ್ತಡ ತಂದರೂ, ಇದು ಸಾಧ್ಯವಾಗಲಿಲ್ಲ. ಸದ್ಯ ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪಂಪ್‌ವೆಲ್‌ ಕಾಮಗಾರಿ ಪೂರ್ಣಗೊಳ್ಳುವುದು ಅನುಮಾನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next