Advertisement

ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ದೊರೆಯಲಿ: ನಾಯಕ

05:12 PM Apr 30, 2022 | Team Udayavani |

ಮಾನ್ವಿ: ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ದೊರೆಯಬೇಕು ಎನ್ನುವ ಉದ್ದೇಶದಿಂದ ಸರಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಶಾಸಕರ ಅನುದಾನದಲ್ಲಿ ಮಾನ್ವಿ ಮತ್ತು ಸಿರವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ 50 ಲಕ್ಷ ರೂ. ವೆಚ್ಚದಲ್ಲಿ ಆಂಬ್ಯುಲೆನ್ಸ್‌ ವಾಹನಗಳನ್ನು ನೀಡಲಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.

Advertisement

ಪಟ್ಟಣದ ರೈತ ಭವನದಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗೆ ಅಗತ್ಯವಾಗಿರುವ ಮೂಲ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಜನರೇಟರ್‌ ವ್ಯವಸ್ಥೆ, ಕಾಂಪೌಂಡ್‌ ನಿರ್ಮಾಣ, ತಜ್ಞ ವೈದ್ಯರ ಸೇವೆ ಕಲ್ಪಿಸಲಾಗಿದ್ದು, ರೋಗಿಗಳ ಅನುಕೂಲಕ್ಕಾಗಿ ಬೈಯರ್‌ ಕಂಪನಿ ಸಹಯೋಗದಲ್ಲಿ 1.5 ಕೋಟಿ ವೆಚ್ಚದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಕೂಡ ಸ್ಥಾಪಿಸಲಾಗಿದೆ ಎಂದರು.

ಆರೋಗ್ಯ ಮೇಳದಲ್ಲಿ ಆಯುಷ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಆಶಾ ಕಾರ್ಯಕರ್ತೆಯರು ಸೇರಿದಂತೆ 18ಕ್ಕೂ ಹೆಚ್ಚು ಮಳಿಗೆಗಳ ಮೂಲಕ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಶೇಖರಯ್ಯಸ್ವಾಮಿ ಆರೋಗ್ಯ ಇಲಾಖೆಯಿಂದ ಜನರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಶಾಸಕರು ಆಯುಷ್ಮನ್‌ ಭಾರತ ಯೋಜನೆಯಡಿ ಆರೋಗ್ಯ ಕಾರ್ಡ್‌ ಗಳನ್ನು ಫಲಾನುಭವಿಗಳಿಗೆ ವಿತರಿಸಿದರು. ಆರೋಗ್ಯ ಮೇಳದಲ್ಲಿನ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.

ಪುರಸಭೆ ಅಧ್ಯಕ್ಷೆ ರಸೀದಾ ಬೇಗಂ, ತಹಶೀಲ್ದಾರ್‌ ಚಂದ್ರಕಾಂತ್‌. ಎಲ್‌.ಡಿ, ಗ್ರೇಡ್‌-2 ತಹಶೀಲ್ದಾರ್‌ ಅಬ್ದುಲ್‌ ವಾಹಿದ್‌, ತಾಪಂ ಇಒ ಸ್ಟೇಲಾ ವರ್ಗೀಸ್‌, ಶರಣಪ್ಪಗೌಡ ನಕುಂದಿ, ಟಿ. ಮಲ್ಲಿಕಾರ್ಜುನ ಪಾಟೀಲ್‌ ಬಲ್ಲಟಗಿ, ಮುಖ್ಯ ವೈದ್ಯಾಧಿಕಾರಿ ಡಾ| ಮಲ್ಲನಗೌಡ, ಎಸ್‌.ಪಾಟೀಲ್‌, ನಾಗೇಶ, ಡಾ| ಗಣೇಶ, ಡಾ| ಮನೋಹರ ಪತ್ತರ, ಸುಭದ್ರದೇವಿ, ಡಾ| ಯಶೋಧರ ನಂದಿನಿ, ಗಂಗಾಧರ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next