Advertisement
ಬಿಳಿನೆಲೆ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಬಿಳಿನೆಲೆ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಜರಗಿದ ಯುವ ಮೋರ್ಚಾ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರುಮಾತನಾಡಿದರು. ದೇಶ ಅಭಿವೃದ್ಧಿಯಾಗಬೇಕಾದರೆ ಇಚ್ಛಾ ಶಕ್ತಿಯ ನಾಯಕರು ಬೇಕು. ಇಂದು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿ ಇಡೀ ವಿಶ್ವವನ್ನೇ ಸೆಳೆದಿದೆ. ಅವರ ಕೈಗಳನ್ನು ಬಲಿಪಡಿಸುವುದು ಯುವ ಸಮೂಹದ ಕರ್ತವ್ಯ ಎಂದರು.
ಕಾಂಗ್ರೆಸ್ ಮುಕ್ತ ಭಾರತದ ಕಡೆ ಬಿಜೆಪಿಯ ನಾಗಾಲೋಟ ಮುಂದುವರಿಯುತ್ತಿದೆ. ಮುಂದಿನ ದಿನ ಗಳಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆ ನಿರ್ಣಾಯಕವಾಗಲಿದೆ. ಆದುದರಿಂದ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಪಕ್ಷದ ಗೆಲುವಿನ ಅಂತರವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಅವರು ಕರೆ ನೀಡಿದರು. ಜನಪರ ಯೋಜನೆ ಬಗ್ಗೆ ತಿಳಿಸಿ
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತದಲ್ಲಿ ತನ್ನ ಸ್ವಂತ ವರ್ಚಸ್ಸಿನ ಮೂಲಕ ಅನುದಾನಗಳನ್ನು ತರಿಸಿಕೊಂಡು ಕ್ಷೇತ್ರದ ಅಭಿವೃದ್ಧಿ ಮಾಡಿಸುತ್ತಿರುವ ನಮ್ಮ ಕ್ಷೇತ್ರದ ಶಾಸಕರ ಕೆಲಸ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ದು ಅರ್ಹ ಫಲಾನುಭವಿಗಳಿಗೆ ಸರಕಾರದ ಸವಲತ್ತುಗಳನ್ನು ತೆಗೆಸಿಕೊಡುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡಬೇಕು ಎಂದು ಅವರು ಸಲಹೆ ನೀಡಿದರು.
Related Articles
Advertisement
ಯುವ ಮೋರ್ಚಾ ಸದಸ್ಯ ರಾಜೇಶ್ ಸೂಡ್ಲು ಸ್ವಾಗತಿಸಿ, ಬಿಜೆಪಿ ಬಿಳಿನೆಲೆ ಗ್ರಾಮಸಮಿತಿಯ ಅಧ್ಯಕ್ಷ ವಿಜಯಕುಮಾರ್ ಎರ್ಕ ಪ್ರಸ್ತಾವನೆಗೈದರು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷೆ ಸರೋಜಿನಿ ಜಯಪ್ರಕಾಶ್ ನಿರೂಪಿಸಿ, ಹರ್ಷಿತ್ ಸೂಡ್ಲು ವಂದಿಸಿದರು.
ಕಾರ್ಯಕರ್ತರು ಬಿಜೆಪಿಯ ಆಸ್ತಿಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಪದ್ಮನಾಭ ಶೆಟ್ಟಿ ಅವರು ಮಾತನಾಡಿ, ಬಿಜೆಪಿ ಇಂದು ಇಷ್ಟೊಂದು ಎತ್ತರಕ್ಕೆ ಏರಿದ್ದರೆ ಅದು ಕಾರ್ಯಕರ್ತರ ಶ್ರಮದ ಫಲ. ಪಕ್ಷಕ್ಕಾಗಿ ಪ್ರಾಮಾಣಿಕತೆಯಿಂದ ದುಡಿಯುವ ಸಕ್ರಿಯ ಕಾರ್ಯಕರ್ತರು ಬಿಜೆಪಿಯ ಆಸ್ತಿ. ಅದರಲ್ಲಿಯೂ ಬಿಜೆಪಿಯ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಯುವ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಮತ್ತಷ್ಟು ದುಡಿಯಬೇಕು ಎಂದರು.