ಕುಂದಾಪುರ: ಕ್ಷೇತ್ರದ ಶಾಸಕರು ಬಿಜೆಪಿಯವರೇ ಆಗಿದ್ದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನೆಂಪುವಿನಲ್ಲಿ ವಂಡ್ಸೆ , ಕಾವ್ರಾಡಿ ಶಕ್ತಿ ಕೇಂದ್ರಗಳ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇವತ್ತಿನಿಂದ ಕ್ಷೇತ್ರಾದ್ಯಂತ ಪ್ರವಾಸ ಆರಂಭ ಮಾಡಿದ್ದೇನೆ. ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯ ಆರಂಭವಾಗಿದೆ. ರಾಜಕೀಯ ಪಕ್ಷಗಳಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗುವ ಕಾರ್ಯಕರ್ತರು ಇದ್ದರೆ ಅದು ಬಿಜೆಪಿಯಲ್ಲಿ ಮಾತ್ರ. ಕಾರ್ಯಕರ್ತರ, ಜನರ ಭಾವನೆಗಳು ಹುಸಿಯಾಗದಂತೆ ಮುಂದೆಯೂ ಕೂಡಾ ಕೆಲಸ ಮಾಡುತ್ತೇನೆ ಎಂದರು.
ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಅತಿಹೆಚ್ಚಿನ ಮತಗಳ ಅಂತರದಿಂದ ಬಿಜೆಪಿಯನ್ನು ಗೆಲ್ಲಿಸಬೇಕು. ಮೋದಿ ಅವರನ್ನು ಮತ್ತೆ ಪ್ರಧಾನಿ ಸ್ಥಾನದಲ್ಲಿ ಅಲಂಕರಿಸುವಂತೆ ಮಾಡಬೇಕು ಎಂದರು.
ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬಿಜೆಪಿ ವಿಭಾಗ ಸಹ ಸಂಘಟಕ ಕಾರ್ಯದರ್ಶಿ ನಟರಾಜ್, ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ, ಬಿಜಿಪಿ ಮುಖಂಡರಾದ ಪ್ರವೀಣ್ ಕುಮಾರ್ ಗುರ್ಮೆ, ಶಕ್ತಿ ಕೇಂದ್ರದ ಪ್ರಮುಖರಾದ ರಾಮಚಂದ್ರ ಮಂಜ ಮಾರಣಕಟ್ಟೆ, ಡಾ| ಅತುಲ್ ಕುಮಾರ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್, ಮಹಿಳಾ ಮೋರ್ಚ ಅಧ್ಯಕ್ಷೆ ಪ್ರಿಯದರ್ಶಿನಿ, ಜಿ. ಪಂ. ಸದಸ್ಯರಾದ ಬಾಬು ಹೆಗ್ಡೆ, ರೋಹಿತ್ ಕುಮಾರ್ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಶ್ಯಾಮಲ ಕುಂದರ್, ತಾ.ಪಂ. ಸದಸ್ಯರಾದ ಸುರೇಂದ್ರ ಖಾರ್ವಿ, ಮಹೇಂದ್ರ ಪೂಜಾರಿ, ಸುರೇಂದ್ರ ಖಾರ್ವಿ, ನಾರಾಯಣ ಕೆ. ಗುಜ್ಜಾಡಿ, ಮಂಜು ದೇವಾಡಿಗ, ಶೇಖರ ದೇವಾಡಿಗ ಉಪಸ್ಥಿತರಿದ್ದರು.
ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿದರು.