Advertisement
ನಗರದ ಕಾಂಗ್ರೆಸ್ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಘಟಕಗಳ ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಜೋಡೋ ಪಾದಯಾತ್ರೆ ಈಗಾಗಲೇ ತಮಿಳುನಾಡು ಮತ್ತು ಕೇರಳದಲ್ಲಿ ಯಶಸ್ಸು ಕಂಡಿದೆ. ಅದೇ ಯಶಸ್ಸು ಕರ್ನಾಟಕದಲ್ಲಿ ಸಹ ಮುಂದುವರಿಯಬೇಕು ಎಂದರು.
Related Articles
Advertisement
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ ಮಾತನಾಡಿ, ಭಾರತ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಆಗಿರಬೇಕು ಎಂದು ಹೇಳಿದರು.
ಕಲ್ಪನಾ ಜೋಶಿ ಅವರು ಪಕ್ಷಕ್ಕಾಗಿ 22 ವರ್ಷ ಕೆಲಸ ಮಾಡಿದ್ದರಿಂದ ಇಂದು ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.
ಕಲ್ಪನಾ ಜೋಶಿ ಮಾತನಾಡಿ 22 ವರ್ಷಗಳ ನನ್ನ ರಾಜಕೀಯ ಜೀವನವನ್ನು ಗುರುತಿಸಿ ಪಕ್ಷ ಇಂದು ನನಗೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದೆ. ಇದರಿಂದ ಪಕ್ಷದಲ್ಲಿ ನಿಷ್ಠೆಯಿಂದ ಇನ್ನಷ್ಟು ಕೆಲಸ ಮಾಡಲು ಹುಮ್ಮಸ್ಸು ಬಂದಿದೆ ಎಂದರು.
ಇದೇ ವೇಳೆ ಕೆಪಿಸಿಸಿಯ ನೂತನ ಸದಸ್ಯರನ್ನು ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಹಣಮನ್ನವರ, ಮಹಾವೀರ ಮೋಹಿತೆ, ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ ಎಸ್ .ಎಫ್. ಜಕ್ಕಪ್ಪನವರ್, ಗಜಾನನ ಮಂಗಸೂಳಿ, ಸದಾಶಿವ ಬೂಟಾಳಿ, ಸುನೀಲ್ ಸಂಕ್, ಶ್ಯಾಮ್ ಪೂಜಾರಿ, ಮಾಜಿ ಶಾಸಕರಾದ ರಮೇಶ ಕುಡಚಿ, ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಕಿರಣ ಸಾಧುನವರ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ್ ಉಪಸ್ಥಿತರಿದ್ದರು.