Advertisement

ತಾಕತ್ತಿದ್ದರೆ ಬಹುಮತ ತೋರಿಸಲಿ: ಉಗ್ರಪ್ಪ

07:05 AM May 18, 2018 | Team Udayavani |

ಬೆಂಗಳೂರು: ಬಹುಮತ ಇಲ್ಲದೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್‌.ಯಡಿಯೂರಪ್ಪನವರು ತಾಕತ್ತಿದ್ದರೆ, 104ಕ್ಕಿಂತ ಹೆಚ್ಚಿನ ಸಂಖ್ಯೆಯ ಶಾಸಕರ ಬಹುಮತ ತೋರಿಸಲಿ ಎಂದು ವಿಧಾನ ಪರಿಷತ್‌ ಸದಸ್ಯ ವಿ.
ಎಸ್‌.ಉಗ್ರಪ್ಪ ಸವಾಲು ಹಾಕಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ. ಗೋವಾ, ಮಣಿಪುರ, ಮೇಘಾಲಯದಲ್ಲಿ ಬಿಜೆಪಿಯನ್ನು 2ನೇ ಸ್ಥಾನಕ್ಕೆ ತಳ್ಳಿದ್ದರೂ,ಸರ್ಕಾರ ರಚನೆಗೆ ಅವ ರಿಗೆ ಅವಕಾಶ ಮಾಡಿಕೊಡಲಾಗಿದೆ. ಕರ್ನಾಟಕದಲ್ಲಿ ಬಹುಮತ ಇಲ್ಲದ ಬಿಜೆಪಿಗೆ ಅವಕಾಶ ಮಾಡಿ ಕೊಡುವ ಮೂಲಕ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಹಾಗೂ ಅಮಿತ್‌ ಶಾ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು,ತುಘಲಕ್‌ ದರ್ಬಾರ್‌ ನಡೆಸಿದ್ದಾರೆ. ಬಹುಮತ ಇಲ್ಲದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next