ಬೆಳಗಾವಿ: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯ ನಿರ್ಣಯವನ್ನು ವಿರೋಧ
ಮಾಡಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ವಿರುದ್ಧ ತಾಕತ್ತಿದ್ದರೆ ಮುಖ್ಯಮಂತ್ರಿ ಕ್ರಮ
ಕೈಗೊಳ್ಳಲಿ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.
ನಗರದಲ್ಲಿ ಶನಿವಾರ ಮಾತನಾಡಿ, ಮುಖ್ಯಮಂತ್ರಿಯವರಿಗೆ ತಾಕತ್ತಿದ್ದರೆ ಶಾಮನೂರ ಶಿವಶಂಕರಪ್ಪ ಅವರನ್ನು ಪಕ್ಷದಿಂದ
ಕಿತ್ತುಹಾಕಲಿ ಎಂದು ಹೇಳಿದರು.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವ ಬಗ್ಗೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಆದರೆ, ಇದನ್ನು ಲಿಂಗಾಯತ ಧರ್ಮದ ಪ್ರಮುಖರೇ ವಿರೋಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಗಳನ್ನು ಒಡೆಯುವ ಕೆಲಸಕ್ಕೆ ಕೈಹಾಕಿರುವ ಬಗ್ಗೆ ಎಲ್ಲರೂ ಆಕ್ರೋಶಗೊಂಡಿದ್ದಾರೆ ಎಂದರು.